ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರು ಹಾಗೂ ಉಪ ಮುಖ್ಯಮಂತ್ರಿಗಳು ಆದ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.
ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು:
ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು; ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ; ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್‌ಗಳನ್ನು ಸೇವೆಯಿಂದ ಅಮಾನತು ಮಾಡುವಂತೆ ಸೂಚನೆ ನೀಡಿದ್ದಾರೆ. ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಲು, ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದೂ ಆದೇಶ ಮಾಡಿದ್ದಾರೆ.
ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಒಟ್ಟಾರೆಯಾಗಿ ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಚಾಲನೆ ನೀಡಿದ್ದಾರೆ! ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್‌ಗಳನ್ನು ಅಳವಡಿಸಲು ಅನುಮತಿ ನೀಡಿದ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.