ನಾವು ಪಾಕಿಸ್ತಾನದೊಂದಿಗೆ ಮಾತನಾಡದಿದ್ದರೆ, ಗಾಜಾದಲ್ಲಿ ಸಂಭವಿಸಿದೆ ಅದೇ ಪರಿಸ್ಥಿತಿ ನಮಗೂ ಬರಲಿದೆ! ಫಾರೂಕ್ ಅಬ್ದುಲ್ಲಾ
ಶ್ರೀನಗರ: ಪಾಕಿಸ್ತಾನದೊಂದಿಗೆ ಮಾತುಕತೆಗೆ ಏಕೆ ಸಿದ್ಧರಿಲ್ಲ? ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ನಮ್ಮ ಸ್ನೇಹಿತರನ್ನು ಬದಲಾಯಿಸಬಹುದು. ಆದರೆ ನಮ್ಮ ನೆರೆಹೊರೆಯವರನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ವಾಜಪೇಯಿ ಹೇಳಿದ್ದರು. ನೆರೆಯ ದೇಶದೊಂದಿಗೆ ಸ್ನೇಹದಿಂದ ಇದ್ದರೆ ಇಬ್ಬರೂ ಪ್ರಗತಿ ಹೊಂದಬಹುದು. ಪಾಕಿಸ್ತಾನದೊಂದಿಗೆ ಮಾತುಕತೆ ಮುಂದುವರಿಸುವುದು ಅಗತ್ಯವಾಗಿದೆ. ಈಗ ನವಾಜ್ ಷರೀಫ್ ಪಾಕಿಸ್ತಾನದ ಪ್ರಧಾನಿಯಾಗಲಿದ್ದಾರೆ.
ನಾವು ಭಾರತದೊಂದಿಗೆ ಮಾತುಕತೆಗೆ ಸಿದ್ಧರಿದ್ದೇವೆ ಎನ್ನುತ್ತಾರೆ. ನಾವು ಪಾಕಿಸ್ತಾನದೊಂದಿಗೆ ಏಕೆ ಮಾತನಾಡಲು ಸಿದ್ಧರಿಲ್ಲ? ಪಾಕಿಸ್ತಾನದೊಂದಿಗೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳದಿದ್ದಲ್ಲಿ ಇಸ್ರೇಲಿ ಪಡೆಗಳಿಂದ ಬಾಂಬ್ ದಾಳಿಗೊಳಗಾದ ಗಾಜಾದ ಪರಿಸ್ಥಿತಿ ನಮಗೂ ಬರಲಿದೆ. ಜಮ್ಮು ಮತ್ತು ಕಾಶ್ಮೀರ ಮುಂದಿನ ಗಾಜಾ ಆಗಲಿದೆ. ಎಂದು ಅವರು ಹೇಳಿದ್ದಾರೆ.