ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
FIR Archives » Dynamic Leader
October 23, 2024
Home Posts tagged FIR
ರಾಜ್ಯ

ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ಸುಳ್ಳು ಸುದ್ದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಸಮನ್ಸ್ ಪ್ರತಿ

2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ ಎಂದು ಹೇಳಿದ್ದಾರೆ.

ಇದು ಸಹಜ ಕಾನೂನು ಪ್ರಕ್ರಿಯೆ; ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ರಾಜ್ಯ ಸರ್ಕಾರ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಎಂದು ಮಾಧ್ಯಮಗಳು ಸುಳ್ಳು ಸುದ್ದಿ ಬಿತ್ತರಿಸಿ, ಪ್ರಚೋದನೆ ನೀಡುವ ಕೆಲಸ ಮಾಡಬಾರದು ಎಂದು ಮಾಧ್ಯಮಗಳಿಗೆ ಕಿವಿಮಾತು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಇಂತಹ ಸುಳ್ಳು ಸುದ್ದಿ ಪ್ರಸಾರದಿಂದ ಮಾಧ್ಯಮಗಳು ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತವೆ ಜೊತೆಗೆ ಕಾನೂನು ಸುವ್ಯವಸ್ಥೆ ಕೂಡ ಹದಗೆಡುವ ಸಾಧ್ಯತೆ ಅಲ್ಲಗಳೆಯಲಾಗದು. ಹೀಗಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.  

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಇಂದು ಪಾಲ್ಗೊಂಡು ಮಾತನಾಡಿದರು.

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಿಸಿಬಿಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಿದ್ದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂಬ ಭರವಸೆಯನ್ನು ನೀಡಿದರು.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ , ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಲೈಜ್ಞರ್ ಮಹಿಳಾ ಹಕ್ಕುಭತ್ಯೆ ಯೋಜನೆಗೆ ಇಂದು ಚಾಲನೆ; ತಮಿಳುನಾಡಿನಲ್ಲಿ ಸಂಭ್ರಮದ ವಾತಾವರಣ!