ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Kannada Online Portal Archives » Dynamic Leader
November 22, 2024
Home Posts tagged Kannada Online Portal
ಸಿನಿಮಾ

ವರದಿ: ಅರುಣ್ ಜಿ.,

ರಿಚ್ಚಿ ನಾಯಕನಾಗಿ ನಟಿಸಿ, ನಿರ್ದೇಶಿಸಿ ಹಾಗೂ ನಿರ್ಮಾಣ ಮಾಡಿರುವ  “ರಿಚ್ಚಿ” ಚಿತ್ರಕ್ಕಾಗಿ ಖ್ಯಾತ ಗಾಯಕ ಕುನಾಲ್ ಗಾಂಜಾವಾಲ ಹಾಡಿರುವ “ಕಳೆದು ಹೋಗಿರುವೆ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಕುನಾಲ್ ಗಾಂಜಾವಾಲ ಸ್ವತಃ ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು.

ಸಾಮಾನ್ಯವಾಗಿ ನಾನು ನನ್ನ ಹಾಡುಗಳ ಬಿಡುಗಡೆ ಸಮಯದಲ್ಲಿ ಹೆಚ್ಚು ಕಾಣಿಸುವುದಿಲ್ಲ. ಆದರೆ, ಇಲ್ಲಿ ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಗೂ “ರಿಚ್ಚಿ” ಅವರಿಗಾಗಿ ಬಂದಿದ್ದೇನೆ. ಈ ಚಿತ್ರದಲ್ಲಿ ಎರಡು ಹಾಡುಗಳನ್ನು ಹಾಡಿದ್ದೇನೆ. ಒಂದು ಮೆಲೋಡಿ, ಮತ್ತೊಂದು ಪ್ಯಾಥೋ ಸಾಂಗ್. ಇಂದು ಮೆಲೋಡಿ ಸಾಂಗ್ ಬಿಡುಗಡೆಯಾಗಿದೆ. ಅಗಸ್ತ್ಯ ಅವರ ಸಂಗೀತ ಸಂಯೋಜನೆ ಚೆನ್ನಾಗಿದೆ.

ಚಿನ್ನಿ ಪ್ರಕಾಶ್ ಈ ಹಾಡಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಗೌಸ್ ಫಿರ್ ಬರೆದಿದ್ದಾರೆ. “ರಿಚ್ಚಿ” ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಕುನಾಲ್ ಗಾಂಜಾವಾಲ ಹಾರೈಸಿದರು. 2005ನೇ ಇಸವಿಯಲ್ಲಿ “ಆಕಾಶ್” ಚಿತ್ರದ ಹಾಡು ಹಾಡಲು ಬಂದಾಗ ಡಾ.ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರು ನನ್ನ ಕೈಗೊಂದು ಮುತ್ತು ಕೊಟ್ಟಿದ್ದರು. ಅದು ನನ್ನ ಜೀವನದಲ್ಲಿ ಮರೆಯಲಾಗದ ಘಟನೆ ಎಂದ ಕುನಾಲ್ ಗಾಂಜಾವಾಲ, ಪುನೀತ್ ರಾಜಕುಮಾರ್ ಅವರೊಟ್ಟಿಗಿನ ಒಡನಾಟವನ್ನು ನೆನಪಿಸಿಕೊಂಡರು.

“ರಿಚ್ಚಿ” ಒಂದು ಪ್ರೇಮಕಥೆಯ ಚಿತ್ರ. ನಾನು ಚಿಕ್ಕಂದಿನಿಂದಲೇ ಕುನಾಲ್ ಗಾಂಜಾವಾಲ ಅವರ ಅಭಿಮಾನಿ. ನನ್ನ ಚಿತ್ರಕ್ಕೆ ಅವರು ಹಾಡಬೇಕೆಂಬುದು ನನ್ನ ಆಸೆ. ಅದು ಈಡೇರಿದೆ. ಎರಡು ಹಾಡುಗಳನ್ನು ಅವರು ಹಾಡಿದ್ದಾರೆ. ಒಂದು ಈಗ ಬಿಡುಗಡೆಯಾಗಿದೆ. ಕನ್ನಡ ಹಾಗೂ ಹಿಂದಿಯಲ್ಲಿ ಈ ಚಿತ್ರ ಬರಲಿದೆ. ಆಗಸ್ಟ್ ನಲ್ಲಿ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಾಯಕ, ನಿರ್ಮಾಪಕ ಹಾಗೂ ನಿರ್ದೇಶಕ “ರಿಚ್ಚಿ” ಹೇಳಿದರು. 

ಸಂಗೀತ ನಿರ್ದೇಶಕ ಅಗಸ್ತ್ಯ ಸಂತೋಷ್ ಹಾಡುಗಳ ಬಗ್ಗೆ ಮಾಹಿತಿ ನೀಡಿದರು. ಸಹ ನಿರ್ಮಾಪಕ ರಾಕೇಶ್ ರಾವ್, ಪ್ರಕೃತಿ ಬನವಾಸಿ, ನಿರ್ಮಾಪಕರಾದ ಅಣಜಿ ನಾಗರಾಜ್, ವೆಂಕಟೇಶ್ ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ರಾಜಕೀಯ

“ಕನ್ನಡಿಗರ ಹಿತ ರಕ್ಷಣೆಗೆ ನಮ್ಮ ಕೈಗಳು ಸದಾ ಒಂದಾಗಿರಲಿದೆ. ಜನಪರ, ಪಾರದರ್ಶಕ, ಭ್ರಷ್ಟಾಚಾರ ರಹಿತ ಆಡಳಿತ ನೀಡುವ ಜೊತೆಗೆ ನಮ್ಮ ಎಲ್ಲಾ ಗ್ಯಾರೆಂಟಿಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷ ಒಂದು ಕುಟುಂಬವಾಗಿ ಕೆಲಸ ಮಾಡಲಿದೆ” ಎಂದು ಸಿದ್ದರಮಯ್ಯ ಟ್ವೀಟ್ ಮಾಡಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ “ಕರ್ನಾಟಕದ ಸುಭದ್ರ ಭವಿಷ್ಯ ಮತ್ತು ಜನಕಲ್ಯಾಣ ನಮ್ಮ ಪ್ರಮುಖ ಆದ್ಯತೆಯಾಗಿದೆ ಮತ್ತು ಅದನ್ನು ಖಾತರಿಪಡಿಸುವಲ್ಲಿ ನಾವು ಒಗ್ಗಟ್ಟಾಗಿದ್ದೇವೆ. ಎಂದು ಟ್ವೀಟ್ ಮಾಡಿದ್ದಾರೆ.

“ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ. 6.5 ಕೋಟಿ ಕನ್ನಡಿಗರಿಗೆ ಭರವಸೆ ನೀಡಿದ 5 ಖಾತರಿಗಳನ್ನು ನಾವು ಜಾರಿಗೊಳಿಸುತ್ತೇವೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮತ್ತೊಮ್ಮೆ ನಾಡಿನ ಜನತೆಗೆ ಭರವಸೇಯನ್ನು ನೀಡಿದ್ದಾರೆ.

ಮುಖ್ಯಮಂತ್ರಿ ಪಟ್ಟಕ್ಕಾಗಿ ಸುಮಾರು 5 ದಿನಗಳಿಂದ ನಡೆದುಬಂದ ಆಂತರಿಕ ಕಚ್ಚಾಟ ಇವತ್ತಿಗೆ ಕೊನೆಗೊಂಡಿದೆ. “ನಮ್ಮದು ಸಾಮೂಹಿಕ ನಾಯಕತ್ವ; ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ” ಎಂದು ಪದೇ ಪದೇ ಹೇಳಿಕೊಳ್ಳುವ ಕಾಂಗ್ರೆಸ್ ನಾಯಕರು ಅದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಇದನ್ನೇ ‘ಆಂತರಿಕ ಪ್ರಜಾಪ್ರಭುತ್ವ’ ಎಂದು ಹೇಳುವುದು.