ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Pakistan Archives » Dynamic Leader
November 21, 2024
Home Posts tagged Pakistan
ವಿದೇಶ

ಇಸ್ಲಾಮಾಬಾದ್,
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಸೇನಾ ಶಿಬಿರದ ಮೇಲೆ ಇಂದು ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 102 ಪಾಕಿಸ್ತಾನಿ ಸೈನಿಕರು ಹುತಾತ್ಮರಾಗಿದ್ದಾರೆ.

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಮುಸಾಖೆಲ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಭಯೋತ್ಪಾದಕರು ಪ್ರಯಾಣಿಕರ ಬಸ್ ಮತ್ತು ಟ್ರಕ್ ಅನ್ನು ಹೈಜಾಕ್ ಮಾಡಿದ್ದರು. ಭಯೋತ್ಪಾದಕರು ಎರಡು ವಾಹನಗಳಿಂದ ಜನರನ್ನು ಮತ್ತೊಂದು ಸ್ಥಳಕ್ಕೆ ಕರೆದೊಯ್ದು ಗುಂಡಿಕ್ಕಿ ಕೊಂದರು. ಇದರಲ್ಲಿ 23 ಮಂದಿ ಸಾವನ್ನಪ್ಪಿದ್ದರು.

ಈ ಭೀಕರ ಘಟನೆಯನ್ನು ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫ್ರಾಜ್ ಬುಗ್ತಿ (Sarfraz Bugti) ತೀವ್ರವಾಗಿ ಖಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಇಂದು ರಾಸ್ಬೆಲ್ಲಾದಲ್ಲಿ (Rasbella) ಸೇನಾ ಶಿಬಿರದ ಮೇಲೆ ನಡೆದ ದಾಳಿಯಲ್ಲಿ 102 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ವಿದೇಶ

ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಇಲಾಖೆಯ ಅಧಿಕಾರಿಗಳು ಅಲ್-ಖೈದಾ ಮುಖ್ಯಸ್ಥ ಬಿನ್ ಲಾಡೆನ್‌ನ ಆಪ್ತ ಸಹಾಯಕ ಮತ್ತು ಸಂಘಟನೆಯ ಹಿರಿಯ ನಾಯಕ ಅಮಿನ್-ಉಲ್-ಹಕ್‌ನನ್ನು ಬಂಧಿಸಿರುವುದಾಗಿ ಘೋಷಿಸಿದ್ದಾರೆ.

ಗುಪ್ತಚರ ಆಧಾರಿತ ಹುಡುಕಾಟದಲ್ಲಿ ಭಯೋತ್ಪಾದಕ ಅಮೀನ್ ಉಲ್ ಹಕ್ ನನ್ನು ಬಂಧಿಸಲಾಗಿದೆ. ಪಂಜಾಬ್‌ನಲ್ಲಿ ಯೋಜಿಸಲಾಗಿದ್ದ ದೊಡ್ಡ ದಾಳಿಯನ್ನು ಇದರ ಮೂಲಕ ವಿಫಲಗೊಳಿಸಲಾಗಿದೆ. ಅಮೆರಿಕದಿಂದ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲಾಗಿದ್ದ ಅಮೀನ್-ಉಲ್-ಹಕ್ ನನ್ನು ಪಂಜಾಬ್ ಪ್ರಾಂತ್ಯದ ಗುಜರಾತ್ ಜಿಲ್ಲೆಯ ಸರಾಯ್ ಅಲಂಗೀರ್ ಎಂಬಲ್ಲಿ ಬಂಧಿಸಲಾಗಿದೆ ಎಂದು ಡಿಐಜಿ ಉಸ್ಮಾನ್ ಅಕ್ರಮ್ ಗೊನಾಡಲ್ (Usman Akram Gonadal ) ಹೇಳಿದ್ದಾರೆ.

“ಅಮಿನ್-ಉಲ್-ಹಕ್ ಬಂಧನವು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಾಗಿದೆ” ಎಂದು ಪಂಜಾಬ್ ಪೊಲೀಸ್‌ನ ಭಯೋತ್ಪಾದನಾ ನಿಗ್ರಹ ವಿಭಾಗದ ವಕ್ತಾರರು ಹೇಳಿದ್ದಾರೆ.

ಪ್ರಮುಖ ರಚನೆಗಳು ಮತ್ತು ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಪಂಜಾಬ್ ಪ್ರಾಂತ್ಯದಲ್ಲಿ ಪಿತೂರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಯೋಜಿಸಿದ್ದರು ಎಂದು ತಿಳಿದುಬಂದಿದೆ. ಇವರು 1996 ರಿಂದ ಲಾಡೆನ್‌ನ ಆಪ್ತ ಸಹಾಯಕರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಗೌಪ್ಯ ಸ್ಥಳಕ್ಕೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ. 2011ರಲ್ಲಿ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಅಬೋಟಾಬಾದ್‌ನಲ್ಲಿ ಅಡಗಿಕೊಂಡಿದ್ದ ಲಾಡೆನ್‌ನನ್ನು ಹೊಡೆದುರುಳಿಸಲಾಗಿತ್ತು. ಅಮೀನ್-ಉಲ್-ಹಕ್ 2021ರಲ್ಲಿ ಅಫ್ಘಾನಿಸ್ತಾನದಲ್ಲಿ ಪತ್ತೆಯಾಗಿದ್ದು, ಪಾಕಿಸ್ತಾನಿ ಗುರುತಿನ ಚೀಟಿ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೀಡೆ ದೇಶ

ಚೆನ್ನೈ: ವಿಶ್ವ ಕಪ್ ಕ್ರಿಕೆಟ್‌ನ ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ಲೀಗ್ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು.

ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಾಕಿಸ್ತಾನ ತಂಡವು 42.5 ಓವರ್‌ಗಳಲ್ಲಿ 191 ರನ್‌ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ತಂಡದ ಅಬ್ದುಲ್ಲಾ ಶಫೀಕ್ ಮತ್ತು ಇಮಾಮ್ ಉಲ್ ಹಕ್ ಉತ್ತಮ ಆರಂಭ ನೀಡಿದರು. ಪಂದ್ಯದ ವೇಳೆ ಅಭಿಮಾನಿಗಳು ಹಲವು ಬಾರಿ ಜಯಶ್ರೀರಾಮ್ ಘೋಷಣೆ ಕೂಗಿದರು.

ಮತ್ತು ಪಾಕಿಸ್ತಾನದ ಪ್ರಮುಖ ಆಟಗಾರ ‘ರಿಜ್ವಾನ್’ 49 ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ಮರಳಿದಾಗ ‘ಜಯಶ್ರೀರಾಮ್’ ಘೋಷಣೆಗಳು ಮೊಳಗಿದವು. ಇದನ್ನು ಹಲವರು ಟೀಕಿಸಿದ್ದಾರೆ. ಆಟವನ್ನು ಆಟವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ವೀಡಿಯೋವೊಂದನ್ನು ಹಂಚಿಕೊಂಡಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, “ಆತಿಥ್ಯಕ್ಕೆ ಹೆಸರುವಾಸಿಯಾದ ಭಾರತದಲ್ಲಿ ಪಾಕಿಸ್ತಾನಿ ಆಟಗಾರರ ವಿರುದ್ಧ ಘೋಷಣೆಗಳು ಸ್ವೀಕಾರಾರ್ಹವಲ್ಲ. ಕ್ರೀಡೆ ಎಂಬುದು ರಾಷ್ಟ್ರಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು.

ಕ್ರೀಡೆಗಳು ಯಾವಾಗಲೂ ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷ ಹರಡಲು ಕ್ರೀಡೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿದೇಶ

ಇಸ್ಲಾಮಾಬಾದ್: ಅಲ್ ಖಾದಿರ್ ಟ್ರಸ್ಟ್ ಹಗರಣದ ಪ್ರಕರಣದಲ್ಲಿ, ತೆಹ್ರೀಕ್-ಎ-ಇನ್ಸಾಫ್ ಪಕ್ಷದ ನಾಯಕ ಹಾಗೂ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಕಳೆದ 9 ರಂದು ಇಸ್ಲಾಮಾಬಾದ್ ಹೈಕೋರ್ಟ್ ಆವರಣದಲ್ಲಿ ರಾಷ್ಟ್ರೀಯ ಭ್ರಷ್ಟಾಚಾರ ನಿಗ್ರಹ ದಳದವು ಬಂದಿಸಿತ್ತು. ಅವರ ಬಂಧನವು ಕಾನೂನು ಬಾಹೀರ ಎಂದು ಹೇಳಿದ ಅಲ್ಲಿನ ಸುಪ್ರೀಂ ಕೋರ್ಟ್ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಅಲ್ಲಿನ ಹೈಕೋರ್ಟ್ ಗೆ ಆದೇಶ ನೀಡಿತ್ತು.

ಈ ಪ್ರಕರಣವು ಇಸ್ಲಾಮಾಬಾದ್ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಸುಪ್ರೀಂ ಕೋರ್ಟ್ ಸೂಚನೆಯ ಮೇರೆಗೆ ಇಮ್ರಾನ್ ಖಾನ್ ಅವರಿಗೆ ಎರಡು ವಾರಗಳ ಕಾಲ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿದ್ದ ಎರಡು ವಾರಗಳ ಜಾಮೀನ್ ಇಂದು ಮುಕ್ತಾಯಗೊಂಡಿದ್ದ ಹಿನ್ನಲೆಯಲ್ಲಿ ಈ ಪ್ರಕರಣವು ಮತ್ತೆ ಇಂದು ವಿಚಾರಣೆಗೆ ಬಂದಿತ್ತು.

ಇದನ್ನೂ ಓದಿ: ಅಸ್ಥಿರ ಪಾಕಿಸ್ತಾನ ಅಪಾಯಕಾರಿ: ಫಾರೂಕ್ ಅಬ್ದುಲ್ಲಾ ಅಭಿಪ್ರಾಯ!

ವಿಚಾರಣೆಯ ನಂತರ ಇಮ್ರಾನ್ ಖಾನ್ ಅವರ ವಿರುದ್ಧ ಆರೋಪಿಸಲಾಗಿದ್ದ 8 ಪ್ರಕರಣಗಳಲ್ಲಿ ಜೂನ್ 8 ರವರೆಗೆ ಜಾಮೀನು ಮಂಜೂರು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

 

ವಿದೇಶ

ವಾಷಿಂಗ್ಟನ್: ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಬಂಧಿಸಲಾಗಿದ್ದ ಉಗ್ರ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ನ್ಯಾಯಾಲಯವು ಅನುಮತಿ ನೀಡಿದೆ. 2008ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ 166 ಮಂದಿ ಸಾವನ್ನಪ್ಪಿದ್ದರು. ದಾಳಿಯ ಪ್ರಮುಖ ಶಂಕಿತ ಡೇವಿಡ್ ಹೆಡ್ಲಿಯನ್ನು ಅಮೆರಿಕಾದಲ್ಲಿ ಬಂಧಿಸಲಾಗಿತ್ತು. ಆತನು ಈಗ 35 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾರೆ.

ಡೇವಿಡ್ ಹೆಡ್ಲಿ

ಆತನ ಸ್ನೇಹಿತ ಮತ್ತು ಸಹ-ಸಂಚುಕೋರ ಪಾಕಿಸ್ತಾನ ಮೂಲದವನಾಗಿದ್ದು ಕೆನಡಾದಲ್ಲಿ ನೆಲಸಿದ್ದ ಉದ್ಯಮಿ ತಹವ್ವೂರ್ ರಾಣಾವನ್ನು 2020ರಲ್ಲಿ ಅಮೆರಿಕಾದಲ್ಲಿ ಬಂಧಿಸಲಾಗಿತ್ತು. ದಾಳಿಯಲ್ಲಿ ಆತನ ಪಾತ್ರದ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ನಡೆಸುತ್ತಿದೆ. ಆತನನ್ನು ವಾಂಟೆಡ್ ಕ್ರಿಮಿನಲ್ ಎಂದು ಘೋಷಿಸಿ, ಹಸ್ತಾಂತರಿಸುವಂತೆ ಕೋರಿ ಸಿಬಿಐ ಅಮೆರಿಕದ ಚಿಕಾಗೋ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿತು.

ಮುಂಬೈ ದಾಳಿ

ಲಾಸ್ ಏಂಜಲೀಸ್ ಕೇಂದ್ರ ಜಿಲ್ಲಾ ನ್ಯಾಯಾಧೀಶೆ ಜಾಕ್ವೆಲಿನ್ ಸೂಲ್ಜಿಯನ್ ಅವರು ಮೇ 16 ರಂದು ಹೊರಡಿಸಿದ ಆದೇಶದಲ್ಲಿ, “2008ರ ಮುಂಬೈ ಭಯೋತ್ಪಾದನಾ ದಾಳಿಯ ಶಂಕಿತ ತಹವ್ವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಬಹುದು. ಅವರು ಆರೋಪಿಸಲಾದ ಅಪರಾಧಗಳಿಗಾಗಿ ಅವರನ್ನು ಹಸ್ತಾಂತರಿಸಲು ಆದೇಶಿಸಲಾಗಿದೆ” ಎಂದು ತೀರ್ಪನ್ನು ನೀಡಿದ್ದಾರೆ.

ದೇಶ

ಶ್ರೀನಗರ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಂಧಿಸಿರುವ ಹಿನ್ನಲೆಯಲ್ಲಿ, ದೇಶದಲ್ಲಿ ಅವರ ಬೆಂಬಲಿಗರು ತೀವ್ರ ರೀತಿಯ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕಲ್ಲು ತೂರಾಟದಂತಹ ಘಟನೆಗಳಿಂದ ಹಲವೆಡೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ‘ಅಸ್ಥಿರ ಪಾಕಿಸ್ತಾನ ನಮಗೆ ಅಪಾಯಕಾರಿ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ‘ರೇಂಜರ್ಸ್’ ಎಂದು ಕರೆಯಲ್ಪಡುವ ಗಡಿ ಭದ್ರತಾ ಪಡೆಗಳು ನ್ಯಾಯಾಲಯದ ಕಿಟಕಿಯನ್ನು ಒಡೆದು ಒಳಗೆ ಪ್ರವೇಶಿಸಿ ಕ್ಷಿಪ್ರವಾಗಿ ಬಂಧಿಸಿತು. ಇದರಿಂದ ಕೆರಳಿದ ಇಮ್ರಾನ್ ಬೆಂಬಲಿಗರು, ದೇಶದ ಸೇನೆ ಹಾಗೂ ಐಎಸ್‌ಐ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಏಕಾಏಕಿ ಸೇನಾ ಪ್ರಧಾನ ಕಚೇರಿಯ ಮುಖ್ಯ ದ್ವಾರವನ್ನು ಮುರಿದು ಒಳ ಪ್ರವೇಶಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯನ್ನು ನಿಯಂತ್ರಿಸಲು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಲಾಗಿದೆ. ಇದರಿಂದ ಅಲ್ಲಿ ಕೋಲಾಹಲ ಉಂಟಾಗಿತ್ತು.

ಈ ನಿಟ್ಟಿನಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು, “ಅಸ್ಥಿರ ಪಾಕಿಸ್ತಾನ ನಮಗೆ ಅಪಾಯಕಾರಿಯಾಗಿದೆ, ನಮ್ಮ ಉಪಖಂಡದಲ್ಲಿರುವ ದೇಶವು ಶಾಂತಿಯುತ ಮತ್ತು ಸ್ಥಿರವಾಗಿರಬೇಕು. ಆ ದೇಶವು ಚೆನ್ನಾಗಿರಬೇಕೆಂದು ನಾನು ಬಯಸುತ್ತೇನೆ. ನಮ್ಮ ನೆರೆಯ ದೇಶದವರು ಉತ್ತಮ ಮತ್ತು ಶಾಂತಿಯುತ ಜೀವನವನ್ನು ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದರು.

ವಿದೇಶ

ಟರ್ಕಿ ಮತ್ತು ಸಿರಿಯಾದಲ್ಲಿ ಭೂಕಂಪದ ಬಗ್ಗೆ ಮೂರು ದಿನಗಳ ಮೊದಲೇ ಭವಿಷ್ಯ ನುಡಿದಿದ್ದ ಡಚ್ ಸಂಶೋಧಕ ಫ್ರಾಂಕ್ ಹೂಗರ್‌ ಬೀಟ್ಸ್, ಭಾರತದಲ್ಲೂ ಭೂಕಂಪ ಸಂಭವಿಸಲಿದೆ ಎಂದು ಹೇಳಿದ್ದಾರೆ.

ಟರ್ಕಿ ಮತ್ತು ಸಿರಿಯಾದಲ್ಲಿ ಭಾನುವಾರ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ ಸತ್ತವರ ಸಂಖ್ಯೆ 11 ಸಾವಿರವನ್ನು ದಾಟಿದೆ. ಸಾವಿರಾರು ಮಂದಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹಾತೊರೆಯುತ್ತಿರುವ ಈ ಸಂದರ್ಭದಲ್ಲಿ ಜಗತ್ತು ಅವರಿಗೆ ನೆರವಿನ ಹಸ್ತವನ್ನು ಚಾಚುತ್ತಿವೆ.

ಟರ್ಕಿ ಮತ್ತು ಸಿರಿಯಾದಲ್ಲಿ ಮುಂಜಾನೆ ವೇಳೆ; ಜನರು ಗಾಢ ನಿದ್ರೆಯಲ್ಲಿದ್ದಾಗ ನಡುಕ ಸಂಭವಿಸಿತು ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗಿರುತ್ತದೆ ಎಂದು ವರದಿಗಳು ಹೇಳುತ್ತಿವೆ.

ಆದರೆ ಒಬ್ಬ ವ್ಯಕ್ತಿ ಮಾತ್ರ ಜಗತ್ತನ್ನು ಸಂಕಷ್ಟಕ್ಕೆ ದೂಡಿರುವ ಈ ಟರ್ಕಿ-ಸಿರಿಯಾ ಭೂಕಂಪದ ಬಗ್ಗೆ ಮೊದಲೇ ಮುನ್ಸೂಚನೆ ನೀಡಿ ಎಚ್ಚರಿಕೆಯನ್ನು ನೀಡಿದ್ದಾರೆ. ಈ ದುರಂತ ಘಟನೆಗೆ ನಡೆಯುವ ಮೂರು ದಿನಗಳ ಮೊದಲೇ ಫ್ರಾಂಕ್ ಹೂಗರ್‌ ಬೀಟ್ಸ್ ಎಂಬ ಡಚ್ ವಿಜ್ಞಾನಿ, ‘ಫೆಬ್ರವರಿ 3 ರಂದು, ದಕ್ಷಿಣ-ಮಧ್ಯ ಟರ್ಕಿ, ಜೋರ್ಡಾನ್, ಸಿರಿಯಾ ಮತ್ತು ಲೆಬನಾನ್‌ನಲ್ಲಿ ಈಗ ಅಥವಾ ಕೆಲವೇ ದಿನಗಳಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಲಿದೆ’ ಎಂದು ಹೇಳಿದ್ದರು.

ಅವರು ನೆದರ್ಲ್ಯಾಂಡ್ ನ ಸೌರವ್ಯೂಹದ ಆಕಾರದ ಸಂಶೋಧನಾ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಈ ಹಿನ್ನಲೆಯಲ್ಲಿ ಟರ್ಕಿ, ಸಿರಿಯಾ ನಂತರ ಅಫ್ಘಾನಿಸ್ತಾನದಲ್ಲಿ ಆರಂಭವಾಗುವ ಭೂಕಂಪವು ಪಾಕಿಸ್ತಾನ, ಭಾರತದ ಮೂಲಕ ಹಾದು ಹಿಂದೂ ಮಹಾಸಾಗರದಲ್ಲಿ ಕೊನೆಗೊಳ್ಳಲಿದೆ ಎಂದು ಡಚ್ ವಿಜ್ಞಾನಿ ಫ್ರಾಂಕ್ ಹೂಗರ್‌ ಬೀಟ್ಸ್ ಎಚ್ಚರಿಸಿದ್ದಾರೆ.

ಪಾಕಿಸ್ತಾನದ ರಾಜ್ಯ ಸಚಿವ ಇಬ್ರಾಹಿಂ, ಡಚ್ ವಿಜ್ಞಾನಿ ಫ್ರಾಂಕ್ ಹೂಗರ್‌ ಬೀಟ್ಸ್ ಮಾಡಿರುವ ಸಂಭಾಷಣೆಯ ವೀಡಿಯೋವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಪಾಕಿಸ್ತಾನ, ಭಾರತ ಮತ್ತು ಅಫ್ಘಾನಿಸ್ತಾನದಲ್ಲಿ ಭೂಕಂಪದ ಅಪಾಯವಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Earthquake To Strike India Very Soon? Dutch Researcher Frank Hoogerbeets, Who Predicted Earthquake in Turkey and Syria, Had Made Similar Predictions About India, Pakistan and Afghanistan (Watch Video)

A video of Frank Hoogerbeets is going viral in which he is seen predicting a large size earthquake originating in Afghanistan.

ದೇಶ

ನವದೆಹಲಿ: ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಲ್ಲಿ ನೆಲೆಸಿರುವ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತೀಯ ಪೌರತ್ವವನ್ನು ನೀಡಲು ಒಂಬತ್ತು ರಾಜ್ಯಗಳ 31 ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಉತ್ತರಿಸಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರಾಯ್, ‘ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಂತಹ ದೇಶಗಳಲ್ಲಿ ವಾಸಿಸುವ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹೊರತುಪಡಿಸಿ, ಪೌರತ್ವ ಕಾಯಿದೆ 1955ರ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗುತ್ತಿದೆ.

ಪೌರತ್ವಕ್ಕಾಗಿ ಬಂದಿರುವ ಅರ್ಜಿಗಳ ಮೇಲೆ ಶೀಗ್ರದಲ್ಲಿ ಕ್ರಮ ಕೈಗೊಂಡು ಕೂಡಲೇ ಪೌರತ್ವ ನೀಡಲು, ಒಂಬತ್ತು ರಾಜ್ಯಗಳ 31 ಜಿಲ್ಲಾಧಿಕಾರಿಗಳಿಗೆ ಅಧಿಕಾರವನ್ನು ನೀಡಲಾಗಿದೆ.

ಅದರಂತೆ ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಹಾಗೂ ನವದೆಹಲಿಯ 31 ಕಲೆಕ್ಟರ್‌ಗಳಿಗೆ ಪೌರತ್ವ ನೀಡುವ ಸಂಬಂಧ ನಿರ್ಧಾರಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ’ ಎಂದು ಹೇಳಿದರು.