ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Police Archives » Dynamic Leader
November 21, 2024
Home Posts tagged Police
ದೇಶ

“ಸಾರ್ವಜನಿಕವಾಗಿ ಕಟ್ಟಿಹಾಕಿ ಪೊಲೀಸರಿಂದ ಥಳಿಸುವುದು ಯಾವ ರೀತಿಯ ದಬ್ಬಾಳಿಕೆ?, ಕಟ್ಟಿಹಾಕಿ ಹೊಡೆಯಲು ನಿಮಗೆ ಕಾನೂನು ಅಧಿಕಾರವಿದೆಯೇ?” ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ?

ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ಮೇಲೆ ಪ್ರತಿದಿನ ದಾಳಿಗಳು ನಡೆಯುತ್ತಿವೆ. ಸಿಎಎ (CAA) ಹಾಗೆ ಕಠಿಣ ಕಾನೂನುಗಳನ್ನು ತರುವ ಮೂಲಕ ಅಲ್ಪಸಂಖ್ಯಾತರನ್ನು ಭಾರತದಿಂದ ಪ್ರತ್ಯೇಕಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದು ಒಂದೆಡೆಯಾದರೆ ಮತ್ತೊಂದು ಕಡೆ ಹಿಂದೂ ಗುಂಪುಗಳು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಮೂಲಕ ಹಿಂಸಾಚಾರವನ್ನು ಅನಾವರಣಗೊಳಿಸುತ್ತಿವೆ.

ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಂತಹ ರಾಜ್ಯಗಳಲ್ಲಿ ಹೆಚ್ಚು ಧಾರ್ಮಿಕ ಸಂಘರ್ಷಗಳಿವೆ. ಆದರೆ ಈಗ ಬಿಜೆಪಿಯೇತರ ರಾಜ್ಯಗಳಲ್ಲಿ ಕೂಡ ಧಾರ್ಮಿಕ ಸಂಘರ್ಷಗಳು ನಡೆಯುತ್ತಿವೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಸುದೀರ್ಘ ಕಾಲ ಆಡಳಿತ ನಡೆಸುತ್ತಿರುವ ಹಾಗೂ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ, ಕಳೆದ ವರ್ಷ ನಡೆದ ಕ್ರೂರ ಘಟನೆಗೆ ಸಂಬಂಧಿಸಿದಂತೆ ತೀರ್ಪೊಂದು ಇದೀಗ ಹೊರಬಿದ್ದಿದೆ.

ಅಕ್ಟೋಬರ್ 2022ರಲ್ಲಿ, ಗುಜರಾತ್‌ನ ಖೇಡಾ ಜಿಲ್ಲೆಯ ಉಂಡೆಲಾ ಗ್ರಾಮದಲ್ಲಿ ಮೂವರು ಯುವಕರು ಪೊಲೀಸರಿಗೆ ಸಿಕ್ಕಿಬಿದ್ದರು. ಕಾರ್ಯಕ್ರಮವೊಂದರಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾದಾಗ ಹಲವರು ಘಟನೆಯನ್ನು ಖಂಡಿಸಿದ್ದರು.

ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಈ ಪ್ರಕರಣದಲ್ಲಿ, ‘ಲಾಠಿಯಿಂದ ಹೊಡೆಯುವುದು ಹಿಂಸೆಯಾಗುವುದಿಲ್ಲ; ನಾವು ಬೇಷರತ್ತಾಗಿ ಕ್ಷಮೆಯಾಚಿಸುತ್ತೇವೆ’ ಎಂದು ಘಟನೆಯಲ್ಲಿ ಭಾಗಿಯಾದ ಪೊಲೀಸರು ನ್ಯಾಯಾಲಯಕ್ಕೆ ಹೇಳಿದ್ದು ವಿವಾದಕ್ಕೀಡಾಗಿತ್ತು.

ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಪೊಲೀಸರ ಅಪರಾಧ ಸಾಬೀತಾಗಿದ್ದು, ಕಳೆದ ವರ್ಷ (2023) ಅಕ್ಟೋಬರ್‌ನಲ್ಲಿ ತಪ್ಪಿತಸ್ಥರಾದ 4 ಪೊಲೀಸರಿಗೆ ಶಿಕ್ಷೆ ಪ್ರಕಟಿಸಲಾಗಿತ್ತು. ಅದರಂತೆ ಗುಜರಾತ್ ಹೈಕೋರ್ಟ್ ಅವರಿಗೆ 14 ದಿನಗಳ ಜೈಲು ಶಿಕ್ಷೆ ಮತ್ತು ರೂ.2,000 ದಂಡ ವಿಧಿಸಿ ತೀರ್ಪು ನೀಡಿತು.

ಆದರೆ ಗುಜರಾತ್ ನ್ಯಾಯಾಲಯದ ತೀರ್ಪಿನ ವಿರುದ್ಧ 4 ಮಂದಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿರುವಾಗಲೇ ನಿನ್ನೆ ಸುಪ್ರೀಂ ಕೋರ್ಟ್ ಮತ್ತೊಮ್ಮೆ ಗುಜರಾತ್ ಪೊಲೀಸರನ್ನು ಪ್ರಶ್ನಿಸಿದೆ.

“ಸಾರ್ವಜನಿಕವಾಗಿ ಕಟ್ಟಿಹಾಕಿ ಪೊಲೀಸರಿಂದ ಥಳಿಸುವುದು ಯಾವ ರೀತಿಯ ದಬ್ಬಾಳಿಕೆ?, ಕಟ್ಟಿಹಾಕಿ ಹೊಡೆಯಲು ನಿಮಗೆ ಕಾನೂನು ಅಧಿಕಾರವಿದೆಯೇ?” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹಾಗೂ “ಜನರನ್ನು ಕಂಬಗಳಿಗೆ ಕಟ್ಟಿಹಾಕಿ, ಸಾರ್ವಜನಿಕವಾಗಿ ಹೊಡೆದು, ವಿಡಿಯೋ ತೆಗೆಯುವುದೆಲ್ಲ ಯಾವ ರೀತಿಯ ಹಿಂಸೆ? ಹಾಗಾಗಿ ಈ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಬೇಕಾಗಿದೆ” ಎಂದು ಹೇಳಿ, ಸದರಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಇಂದು ಪಾಲ್ಗೊಂಡು ಮಾತನಾಡಿದರು.

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈತೊಳೆದುಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್.ಐ.ಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಪ್ರಕರಣಗಳಲ್ಲಿ ದೂರು ಕೊಡುವವರು ಬರಲಿ ಎಂದು ಕಾಯುತ್ತಾ ಕೂರಬಾರದು ಎಂದು ಪೊಲೀಸ್ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸಿಸಿಬಿಯನ್ನು ಇನ್ನಷ್ಟು ಸದೃಢಗೊಳಿಸಲು 230 ಸಿಬ್ಬಂದಿಯನ್ನು ಹೊಸದಾಗಿ ನೇಮಿಸಿಕೊಳ್ಳಲು ಒಪ್ಪಿಗೆ ನೀಡಲಾಗಿದೆ. ಸಿಬ್ಬಂದಿಗೆ ಅಗತ್ಯವಿದ್ದರೆ ಹೊಸ ಕಟ್ಟಡಗಳನ್ನು ಒದಗಿಸಲಾಗುವುದು ಎಂಬ ಭರವಸೆಯನ್ನು ನೀಡಿದರು.

ಹಿರಿಯ ಅಧಿಕಾರಿಗಳು ಜನ ಸಂಪರ್ಕಕ್ಕೆ ಸಿಗದೇ ಹೋದರೆ , ಜನಸ್ನೇಹಿ ಆಗದೇ ಹೋದರೆ ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಠಾಣೆಗೆ ಬರುವ ಬಡವರು, ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಬಗ್ಗೆ ಭರವಸೆ ಹುಟ್ಟುವ ರೀತಿಯಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: ಕಲೈಜ್ಞರ್ ಮಹಿಳಾ ಹಕ್ಕುಭತ್ಯೆ ಯೋಜನೆಗೆ ಇಂದು ಚಾಲನೆ; ತಮಿಳುನಾಡಿನಲ್ಲಿ ಸಂಭ್ರಮದ ವಾತಾವರಣ!

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ರಿವಾರ್ಡ್ 360 ಕಂಪನಿಯ ವೆಬ್‌ಸೈಟ್ ಹ್ಯಾಕ್ ಮಾಡಿ, ಕಸ್ಟಮರ್‌ಗಳಿಗೆ ನೀಡುವ ವೋಚರ್‌ಗಳನ್ನು ತನ್ನ ವಶಕ್ಕೆ ಪಡೆದುಕೊಂಡು ಕಸ್ಟಮರ್‌ಗಳು ವೋಚರನ್ನು ಬಳಕೆ ಮಾಡುವ ಮೊದಲೇ ಬಳಕೆ ಮಾಡಿ, ಇ-ಕಾಮರ್ಸ್ ಕಂಪನಿಗಳ ಮೂಲಕ ಕೋಟ್ಯಾಂತರ ರೂ ಬೆಲೆ ಬಾಳುವ ಚಿನ್ನ, ಬೆಳ್ಳಿ, ದ್ವಿಚಕ್ರ ವಾಹನಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ನಗದು ಹಣವನ್ನು ಆನ್‌ಲೈನ್ ಮುಖಾಂತರ ಖರೀದಿಸಿ ಚಂಚನೆ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸಿ.ಎ.ಎನ್ ಪೊಲೀಸ್ ಠಾಣೆಯ ಪ್ರಕರಣದಲ್ಲಿ ದಸ್ತಗಿರಿ ಮಾಡಿ ಪ್ರಕರಣವನ್ನು ಭೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಆರೋಪಿಯಿಂದ 5.269 ಕೆಜಿ ಚಿನ್ನ, 27.250 ಕೆಜಿ ಬೆಳ್ಳಿ, ರೂ.11 ಲಕ್ಷ 13 ಸಾವಿರ ನಗದು, ವಿವಿಧ ಕಂಪನಿಯ 07 ದ್ವಿಚಕ್ರ ವಾಹನಗಳು, ಪ್ಲಿಪ್ ಕಾರ್ಟ್ ವಾಲೇಟ್ ಪ್ರೀಜ್ ಆದ ರೂ.3 ಲಕ್ಷ 50 ಸಾವಿರ ಹಣ, 2 ಲ್ಯಾಪ್ ಟಾಪ್, 03 ಮೊಬೈಲ್‌ಗಳು ಒಟ್ಟು ಅಂದಾಜು ಮೊತ್ತ 4,16,63,000/- ರೂ ಮೌಲ್ಯದ ವಸ್ತುಗಳನ್ನು ಅಮಾನತ್ತು ಮಾಡಲಾಗಿದೆ

ಕ್ರೈಂ ರಿಪೋರ್ಟ್ಸ್

ಬೆಂಗಳೂರು: ಕಾಟನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನ ಅಕ್ಕಿ ಪೇಟೆ ಮುಖ್ಯ ರಸ್ತೆಯಲ್ಲಿರುವ ಪವನ್ ಪ್ಲಾಜಾ ಕಾಂಪ್ಲೆಕ್ಸ್ ನ ಪಧ್ಮಶ್ರೀ ಫಾರ್ಮ ಅಂಗಡಿಯಲ್ಲಿ, ಯಾವುದೇ ದಾಖಲೆಗಳಿಲ್ಲದೇ ಅಕ್ರಮವಾಗಿ ಹಣ ದಾಸ್ತಾನು ಮಾಡಿಕೊಂಡಿರುವ ಬಗ್ಗೆ ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿಗಳು ಖಚಿತವಾದ ಮಾಹಿತಿಯನ್ನು ಸಂಗ್ರಹಿಸಿ, ಪ್ರಸ್ತುತ ಕರ್ನಾಟಕ ವಿಧಾನ ಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮವಾಗಿ ಹಣ ದಾಸ್ತಾನು ಮಾಡಿಕೊಂಡಿರುವ ಸ್ಥಳದ ಮೇಲೆ ದಾಳಿ ಮಾಡಿ, ಅವರನ್ನು ವಶಕ್ಕೆ ಪಡೆಯಲು ಗಾಂಧಿನಗರ ವಿಧಾನ ಸಭಾ ಕ್ಷೇತ್ರದ ವಿಶೇಷ ಚುನಾವಣಾ ಅಧಿಕಾರಿಗಳೊಂದಿಗೆ ಸೇರಿ ಜಂಟಿ ಕಾರ್ಯಚರಣೆ ನಡೆಸಿ ಅಕ್ರಮವಾಗಿ ಹಣ ದಾಸ್ತಾನು ಮಾಡಿಕೊಂಡಿದ್ದ ಪಧ್ಮಶ್ರೀ ಫಾರ್ಮ ಮೇಲೆ ದಾಳಿ ಮಾಡಿ ಮೂರು ಜನ ಆಸಾಮಿಗಳನ್ನು ಹಾಗೂ ಅವರ ವಸದಲ್ಲಿದ್ದ ಸುಮಾರು 1 ಕೋಟಿ 90 ಲಕ್ಷ ರೂಗಳ ನಗದು ಹಣವನ್ನು ವಸಪಡಿಸಿಕೊಳ್ಳಲಾಗಿದೆ.

ಇವರುಗಳ ವಿರುದ್ಧ ಕ್ರಮ ಜರುಗಿಸಲು ಸ್ಥಳಕ್ಕೆ ಅದಾಯ ತೆರಿಗೆ ಅಧಿಕಾರಿಗಳನ್ನು ಬರಮಾಡಿಕೊಂಡು ಆಸಾಮಿಗಳನ್ನು ಮತ್ತು ವಸಪಡಿಸಿಕೊಂಡಿದ್ದ ಹಣವನ್ನು ಅವರ ಬಳಿ ನೀಡಿದ್ದು, ಆದಾಯ ತೆರಿಗೆ ಇಲಾಖೆಯಲ್ಲಿ ತನಿಖೆ ಮುಂದುವರಿದಿದೆ. ಈ ಕಾರ್ಯಚರಣೆಯನ್ನು ಬೆಂಗಳೂರು ನಗರ ಸಿಸಿಬಿ ವಿಶೇಷ ವಿಚಾರಣಾ ದಳದ ಅಧಿಕಾರಿ ಮತ್ತು ಸಿಬ್ಬಂಧಿಗಳು ಕೈಗೊಂಡಿರುತ್ತಾರೆ.