ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Political News Archives » Page 5 of 5 » Dynamic Leader
November 22, 2024
Home Posts tagged Political News (Page 5)
ರಾಜಕೀಯ

ಬೆಂಗಳೂರು: ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ “ವಿಶ್ವ ಪರಿಸರ ದಿನಾಚರಣೆ 2023” ಕಾರ್ಯಕರಮವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಬಳಿಕ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು,

“ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು. ಸಂಕಷ್ಟದಲ್ಲಿರುವ ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ನೆರವಿಗಾಗಿ ನಾವು ಉಚಿತ ವಿದ್ಯುತ್ ನೀಡಲು ಮುಂದಾಗಿದ್ದೇವೆ. ಒಂದು ವರ್ಷದ ಸರಾಸರಿ ಬಳಕೆಗಿಂತ ಶೇ.10ರಷ್ಟು ಹೆಚ್ಚು ಉಚಿತ ವಿದ್ಯುತ್ ಬಳಕೆಗೆ ನಾವು ಅವಕಾಶ ನೀಡಿದ್ದೇವೆ. ಇದನ್ನು ನಾಡಿನ ಜನತೆ ಸಂಭ್ರಮದಿಂದ ಒಪ್ಪಿಕೊಂಡಿದ್ದಾರೆ ಮತ್ತು ಸ್ವೀಕರಿಸಿದ್ದಾರೆ.

ಆದರೆ, ಜನರಿಂದ ತಿರಸ್ಕೃತಗೊಂಡಿರುವ ಬಿಜೆಪಿ, ವಿದ್ಯುತ್ ಅನ್ನು ಅನಗತ್ಯ ದುರ್ಬಳಕೆ-ದುಂದುವೆಚ್ಚ-ದುರುಪಯೋಗ ಮಾಡಲು ಜರಿಗೆ ಕುಮ್ಮಕ್ಕು ಕೊಡುತ್ತಿದೆ. ಇದು ಅತ್ಯಂತ ಜನವಿರೋಧಿಯಾದದ್ದು. ನಾಡಿನ ಪ್ರಜ್ಞಾವಂತ ಜನತೆ ಇದಕ್ಕೆ ಸೊಪ್ಪಾಕುವುದಿಲ್ಲ ಎನ್ನುವ ಭರವಸೆ ನಮಗಿದೆ. ಪರಿಸರ ಉಳಿಸುವುದು, ಕಾಡು ಬೆಳೆಸುವುದು ಮತ್ತು ಉಳಿಸುವುದು ಕೇವಲ ಅರಣ್ಯ ಇಲಾಖೆ ಕರ್ತವ್ಯ ಅಲ್ಲ. ಪ್ರತಿಯೊಬ್ಬರ ಜವಾಬ್ದಾರಿ. ಪ್ರಕೃತಿಯ ಪ್ರಯೋಜನವನ್ನು ಪಡೆಯುತ್ತಿರುವ ಪ್ರತಿಯೊಬ್ಬರ ಮೇಲೂ ಪ್ರಕೃತಿ ಉಳಿಸುವ ಜವಾಬ್ದಾರಿ ಇದೆ” ಎಂದರು.

ರಾಜಕೀಯ

ಮೈಸೂರು: “ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ” ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ.

“ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ” ಎಂದು ಸಚಿವರು ಭರವಸೆ ನೀಡಿದ್ದಾರೆ.