ಹೊಸದಿಲ್ಲಿ: ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬೆಲೆ ರೂ.200 ಇಳಿಕೆ ಮಾಡುವುದಾಗಿ ಕೇಂದ್ರ ಸರಕಾರ ಘೋಷಿಸಿದೆ. ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡುವುದಾಗಿಯೂ ಘೋಷಿಸಲಾಗಿದೆ.
ಇಂದು (ಆ.29) ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಕೇಂದ್ರ ಸರ್ಕಾರ ದೇಶಾದ್ಯಂತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಮಾಡುವುದಾಗಿ ಘೋಷಿಸಿದೆ. ಅದೇ ರೀತಿ ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡುವುದಾಗಿಯೂ ಘೋಷಿಸಲಾಗಿದೆ.
ಇದನ್ನೂ ಓದಿ: ಸ್ವಾಭಿಮಾನದ ಮದುವೆಗಳನ್ನು ವಕೀಲರೇ ನಡೆಸಬಹುದು; ನ್ಯಾಯಾಲಯದ ಪ್ರತಿನಿಧಿಯಾಗಿ ಅಲ್ಲ! – ಸುಪ್ರೀಂ ಕೋರ್ಟ್
ಇದರ ಬಗ್ಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, “ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಎಲ್ಲಾ ಬಳಕೆದಾರರಿಗೆ ರೂ.200 ಇಳಿಸಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ. ರಕ್ಷಾ ಬಂಧನ್ ಆಚರಿಸುವ ಸಲುವಾಗಿ ದೇಶದ ಮಹಿಳೆಯರಿಗೆ ಇದು ಪ್ರಧಾನಿ ನರೇಂದ್ರ ಮೋದಿಯವರ ಉಡುಗೊರೆಯಾಗಿದೆ.
ಉಜ್ವಲ ಯೋಜನೆಯಡಿಯ ಫಲಾನುಭವಿಗಳಿಗೆ ರೂ.200 ಹೆಚ್ಚುವರಿ ಸಹಾಯಧನ ನೀಡಲಾಗುವುದು. ಇದರಿಂದ 10.35 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ರೂ.7,500 ಕೋಟಿ ವೆಚ್ಚ ಮಾಡಲಿದೆ. ಹಾಗಾಗಿ ಈಗ ಉಜ್ವಲಾ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಖರೀದಿದಾರರು ರೂ.700ಕ್ಕೆ ಮತ್ತು ಇತರರು ರೂ.900ಕ್ಕೆ ಸಿಲಿಂಡರ್ ಖರೀದಿಸಬಹುದು.” ಎಂದು ಹೇಳಿದ್ದಾರೆ.