ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Rajyotsava Archives » Dynamic Leader
November 21, 2024
Home Posts tagged Rajyotsava
ರಾಜ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ, ನಾಡಬಂಧುಗಳಿಗೆ ರಾಜ್ಯೋತ್ಸವದ ಶುಭ ಕೋರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

“ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು” ಎಂದರು.

“ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ” ಎಂದು ಹೇಳಿದರು.

“ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ; ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ. ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು, ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ. ತಮ್ಮ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು” ಎಂದು ಹೇಳಿದರು.  

ರಾಜ್ಯ

ಬೆಂಗಳೂರು: ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ಹೇಳಿದ್ದಾರೆ.

“ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ” ಎಂದು ಹೇಳಿದ್ದಾರೆ.

“1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸಿದ್ದಾರೆ.

ರಾಜಕೀಯ

ಬೆಂಗಳೂರು: ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ‘ಕರ್ನಾಟಕ ಸಂಭ್ರಮ’ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಪ್ರವಾಸೋದ್ಯಮ ಸಚಿವ ಹೆಚ್. ಕೆ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಲವು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Bangalore: A preliminary meeting was held today under the chairmanship of the Chief Minister Siddaramaiah to discuss the organization of the ‘Karnataka Sambhram’ program in collaboration with various departments including the Department of Kannada and Culture, Department of Tourism in the background of 50 years of being named Karnataka.

Kannada and Culture Minister Shivraj Thangadagi, Tourism Minister H. K. Patil, Urban Development Minister Bhairati Suresh, Chief Minister’s Political Secretary Naseer Ahmed and many senior officials of various government departments were present in the meeting.