ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
Udhayanidhi Stalin Archives » Dynamic Leader
October 23, 2024
Home Posts tagged Udhayanidhi Stalin
ದೇಶ

ಬೆಂಗಳೂರು: ಸನಾತನ ಧರ್ಮ ಭಾಷಣದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಇಂದು ಬೆಂಗಳೂರಿನ ಮೆಟ್ರೋಪಾಲಿನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸನಾತನ ವಿರೋಧಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಭಾರತದಾದ್ಯಂತ ಸಂಚಲನ ಮೂಡಿಸಿದ್ದರು. ‘ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಹಾಗಾಗಿ ಸನಾತನ ಧರ್ಮವನ್ನು ತೊಲಗಿಸಬೇಕು’ ಎಂದು ಉದಯನಿಧಿ ಸ್ಟಾಲಿನ್ ಮಾಡಿದ ಭಾಷಣವನ್ನು ಬಿಜೆಪಿ ಮತ್ತು ಬಲಪಂಥೀಯರು ತೀವ್ರವಾಗಿ ಖಂಡಿಸಿದ್ದರು ಮತ್ತು ಪ್ರತಿಭಟನೆಗಳನ್ನು ಸಹ ನಡೆಸಿದ್ದರು. ಈ ಬಗ್ಗೆ ಸ್ವತಃ ಪ್ರಧಾನಿ ಮೋದಿಯವರೇ ತಮ್ಮ ಸಂಪುಟದ ಸಚಿವರೊಂದಿಗೆ ಮಾತನಾಡಿದ್ದರು.

ಅಲ್ಲದೆ, ಸನಾತನ ಧರ್ಮದ ಕುರಿತು ಉದಯನಿಧಿ ಅವರ ಭಾಷಣದ ವಿರುದ್ಧ ನ್ಯಾಯಾಲಯಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿದ್ದವು. ಆ ಮೂಲಕ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತ ಪರಮೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ಖುದ್ದಾಗಿ ಹಾಜರಾಗುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿಯೇ ಬೆಂಗಳೂರಿಗೆ ಆಗಮಿಸಿದ ಉದಯನಿಧಿ, ಇಂದು ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರಾದರು.

ಉದಯನಿಧಿ ಕಡೆಯಿಂದ ಸನಾತನ ಭಾಷಣಕ್ಕೆ ಸಂಬಂಧಿಸಿದಂತೆ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ಕ್ರೋಢೀಕರಿಸಿ ಒಂದೇ ಸ್ಥಳದಲ್ಲಿ ವಿಚಾರಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇವೆ. ಪ್ರಕರಣದ ವಿಚಾರಣೆ ಬಾಕಿ ಇದೆ. ಈ ಬಗ್ಗೆ ದೂರುದಾರರು ಉತ್ತರ ನೀಡಬೇಕಾಗಿದೆ ಹೀಗಾಗಿ ವಿಚಾರಣೆಯನ್ನು ಮುಂದೂಡಬೇಕು ಎಂದು ಮನವಿ ಮಾಡಿದರು.

ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿದರು. ಈ ಪ್ರಕರಣದಲ್ಲಿ ಉದಯನಿಧಿ ಸ್ಟಾಲಿನ್‌ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಧೀಶರು 1 ಲಕ್ಷ ರೂಪಾಯಿ ಬಾಂಡ್ ಪಾವತಿಸುವಂತೆ ಆದೇಶಿಸಿದ್ದಾರೆ.

ದೇಶ

ಚೆನ್ನೈ: ಸನಾತನ ಕುರಿತು ಸಚಿವ ಉದಯನಿಧಿ ಸ್ಟಾಲಿನ್ ಮಾತನಾಡಿರುವುದು ವಿವಾದಕ್ಕೀಡಾಗಿದ್ದು ಇದಕ್ಕೆ ಸಂಬಂಧಿಸಿದ ಪ್ರಕರಣ ಚೆನ್ನೈ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರಂತೆ ಇಂದು ಪ್ರಕರಣದ ವಿಚಾರಣೆ ನಡೆದಾಗ ಉದಯನಿಧಿ ಪರವಾಗಿ ವಾದ ಮಂಡಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸನಾತನ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸನಾತನ ಭಾಷಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ ಕ್ವೋ ವಾರಾಂಟೊ (Quo Warranto) ಪ್ರಕರಣವನ್ನು ವಜಾಗೊಳಿಸಬೇಕು. ಆರೋಪಿಗಳನ್ನು ಸಾಕ್ಷ್ಯ ಕೇಳುವುದು ಸಂವಿಧಾನ ಬಾಹಿರ.

ಆರೋಪ ಸಾಬೀತುಪಡಿಸಲು ಅರ್ಜಿದಾರರೇ ಸಾಕ್ಷ್ಯ ಸಲ್ಲಿಸಬೇಕು ಎಂದು ಸಚಿವ ಉದಯನಿಧಿ ಸ್ಟಾಲಿನ್ ಪರವಾಗಿ ವಾದಿಸಲಾಯಿತು. ಆದ್ದರಿಂದ ಸಾಕ್ಷ್ಯಾಧಾರಗಳನ್ನು ಸಲ್ಲಿಸಲು ವಿಫಲವಾಗಿರುವ ಪ್ರಕರಣವನ್ನು ವಜಾಗೊಳಿಸುವಂತೆ ಮನವಿ ಮಾಡಲಾಗಿತ್ತು.

ನಂತರ, ಮದ್ರಾಸ್ ಹೈಕೋರ್ಟ್ ಸಚಿವರಾದ ಉದಯನಿಧಿ ಸ್ಟಾಲಿನ್, ಶೇಖರ್ ಬಾಬು ಮತ್ತು ಇತರರ ವಿರುದ್ಧದ ಪ್ರಕರಣವನ್ನು ನವೆಂಬರ್ 7 ಕ್ಕೆ ಮುಂದೂಡಿತು.

ಕ್ರೀಡೆ ದೇಶ

ಚೆನ್ನೈ: ವಿಶ್ವ ಕಪ್ ಕ್ರಿಕೆಟ್‌ನ ಬಹು ನಿರೀಕ್ಷಿತ ಭಾರತ-ಪಾಕಿಸ್ತಾನ ಲೀಗ್ ಪಂದ್ಯವು ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು.

ಭಾರತ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಾಕಿಸ್ತಾನ ತಂಡವು 42.5 ಓವರ್‌ಗಳಲ್ಲಿ 191 ರನ್‌ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. ಪಾಕಿಸ್ತಾನ ತಂಡದ ಅಬ್ದುಲ್ಲಾ ಶಫೀಕ್ ಮತ್ತು ಇಮಾಮ್ ಉಲ್ ಹಕ್ ಉತ್ತಮ ಆರಂಭ ನೀಡಿದರು. ಪಂದ್ಯದ ವೇಳೆ ಅಭಿಮಾನಿಗಳು ಹಲವು ಬಾರಿ ಜಯಶ್ರೀರಾಮ್ ಘೋಷಣೆ ಕೂಗಿದರು.

ಮತ್ತು ಪಾಕಿಸ್ತಾನದ ಪ್ರಮುಖ ಆಟಗಾರ ‘ರಿಜ್ವಾನ್’ 49 ರನ್‌ಗಳಿಗೆ ಔಟಾಗಿ ಪೆವಿಲಿಯನ್‌ಗೆ ಮರಳಿದಾಗ ‘ಜಯಶ್ರೀರಾಮ್’ ಘೋಷಣೆಗಳು ಮೊಳಗಿದವು. ಇದನ್ನು ಹಲವರು ಟೀಕಿಸಿದ್ದಾರೆ. ಆಟವನ್ನು ಆಟವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ವೀಡಿಯೋವೊಂದನ್ನು ಹಂಚಿಕೊಂಡಿರುವ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್, “ಆತಿಥ್ಯಕ್ಕೆ ಹೆಸರುವಾಸಿಯಾದ ಭಾರತದಲ್ಲಿ ಪಾಕಿಸ್ತಾನಿ ಆಟಗಾರರ ವಿರುದ್ಧ ಘೋಷಣೆಗಳು ಸ್ವೀಕಾರಾರ್ಹವಲ್ಲ. ಕ್ರೀಡೆ ಎಂಬುದು ರಾಷ್ಟ್ರಗಳ ನಡುವೆ ಒಗ್ಗೂಡಿಸುವ ಶಕ್ತಿಯಾಗಬೇಕು.

ಕ್ರೀಡೆಗಳು ಯಾವಾಗಲೂ ನಿಜವಾದ ಸಹೋದರತ್ವವನ್ನು ಬೆಳೆಸಬೇಕು. ದ್ವೇಷ ಹರಡಲು ಕ್ರೀಡೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜಕೀಯ

ಜೈಪುರ: ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು ಎಂಬ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಗಜೇಂದ್ರ ಸಿಂಗ್ ಶೇಖಾವತ್ ಅವರು ರಾಜಸ್ಥಾನದ ಪರ್ಮಾರ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ,  “ಸನಾತನದ ವಿರುದ್ಧ ಮಾತನಾಡುವ ಯಾರೂ ದೇಶದಲ್ಲಿ ರಾಜಕೀಯ ಅಧಿಕಾರ ಮತ್ತು ಪ್ರತಿಷ್ಠೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ. ಸನಾತನವನ್ನು ನಿರ್ಮೂಲನೆ ಮಾಡುತ್ತೇವೆ ಎಂದು ಹೇಳುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ.

ಇದನ್ನೂ ಓದಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಕಮಲದ ಹೂವುಗಳಿಂದ ಕೂಡಿದ ಹೊಸ ಸಮವಸ್ತ್ರ!

ಸನಾತನವನ್ನು ಉಳಿಸಲು ಪೂರ್ವಜರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು. ಆದರೆ ಕೆಲವರು ಅದನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಸನಾತನದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತೊಗೆಯಬೇಕು” ಎಂದು ಹೇಳಿದರು.

ಇದನ್ನೂ ಓದಿ: ರಿವಾರ್ಡ್ 360 ಕಂಪನಿಯ ವೆಬ್‌ಸೈಟ್ ಹ್ಯಾಕ್: ಸುಮಾರು ರೂ 4 ಕೋಟಿ ಮೌಲ್ಯದ ವಸ್ತುಗಳು ಅಮಾನತ್ತು; ಆರೋಪಿ ಅರೆಸ್ಟ್!

ಸನಾತನ ವಿರೋಧಿಸಿದರೆ ನಾಲಿಗೆಯನ್ನು ಕಿತ್ತೊಗೆಯಬೇಕು ಎಂಬ ಕೇಂದ್ರ ಸಚಿವರ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ರಾಜಕೀಯ

ಬೆಂಗಳೂರು: ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾಗಿದೆ. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ. ನರೇಂದ್ರ ಮೋದಿ ಅವರು ಇನ್ನೂ ಆರ್‌ಎಸ್‌ಎಸ್‌ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ರಾಜಕೀಯ

ಸನಾತನವನ್ನು ತೊಲಗಿಸಬೇಕು ಎಂಬ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಬಿಜೆಪಿ ಪಕ್ಷದ ಮುಖಂಡರು, ಸದಸ್ಯರು ಸೇರಿದಂತೆ ಹಲವರು ಉದಯನಿಧಿ ಸ್ಟಾಲಿನ್ ಅವರನ್ನು ಖಂಡಿಸುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಅಭಿಪ್ರಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೊಲೀಸ್ ಠಾಣೆಗಳಲ್ಲಿ ದೂರು ಸಹ ದಾಖಲಿಸಲಾಗುತ್ತಿದೆ. ಸನಾತನ ವಿಷಯ ಇಡೀ ದೇಶದಲ್ಲಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ, ಅಯೋಧ್ಯೆಯ ಸ್ವಾಮೀಜಿಯೊಬ್ಬರು ನೀಡಿರುವ ಹೇಳಿಕೆ ಸದ್ಯ ಸಂಚಲನ ಮೂಡಿಸಿದೆ.

ತಮಿಳುನಾಡು ಕ್ರೀಡಾ ಸಚಿವ ಉದಯನೀಧಿ ಸ್ಟಾಲೀನ್

ಅಯೋಧ್ಯೆಯ ಸ್ವಾಮೀಜಿ ಪರಮಹಂಸ ಆಚಾರ್ಯರು ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆಗೆ ರೂ.10 ಕೋಟಿ ನೀಡುವುದಾಗಿ ಘೋಷಿಸಿದ್ದಾರೆ. ಇದರೊಂದಿಗೆ ಸಚಿವ ಉದಯನಿಧಿ ಸ್ಟಾಲಿನ್ ಅವರ ಛಾಯಾಚಿತ್ರವನ್ನು ಕತ್ತಿಯಿಂದ ಹರಿದು, ಬೆಂಕಿ ಹಚ್ಚಿರುವ ವೀಡಿಯೊ ಬಿಡುಗಡೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಹಿಂದೆ ಇದೇ ಸ್ವಾಮೀಜಿ ಭಾರತವನ್ನು ಹಿಂದೂ ರಾಷ್ಟ್ರವೆಂದು ಘೋಷಿಸಬೇಕು; ಘೋಷಿಸದಿದ್ದರೆ ಜಲಸಮಾಧಿ ಆಗುತ್ತೇನೆಎಂದು 2021ರಲ್ಲಿ ಘೋಷಿಸಿದ್ದರು (ನೀರಿಗೆ ಇಳಿದು ತಮ್ಮ ಪ್ರಾಣವನ್ನು ತೆಗೆದುಕೊಳ್ಳುತ್ತಾರೆ). ಆದರೆ, ಅವರು ಹಾಗೆ ಮಾಡಲಿಲ್ಲ. ಆ ಮೂಲಕ ಪ್ರಚಾರಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎನ್ನಲಾಗಿದೆ.