ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರು Archives » Dynamic Leader
December 4, 2024
Home Posts tagged ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಸಚಿವರು
ದೇಶ

ನವದೆಹಲಿ: ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಂಡ್ಯ ಸಂಸದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಲಾಗಿದೆ.

ಈ ಕುರಿತು ತಮ್ಮ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು “ಸತತವಾಗಿ 3ನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಭಾರತೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸರಕಾರದ ಸಂಪುಟದಲ್ಲಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ನನಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದು, ಅವರಿಗೆ ನನ್ನ ತುಂಬು ಹೃದಯದ ಧನ್ಯವಾದಗಳು” ಎಂದು ಹೇಳಿದ್ದಾರೆ.

I am deeply grateful to the Hon’ble Prime Minister, Shri.Narendramodi for appointing me as the Minister of Steel and Heavy Industries in the National Democratic Alliance (NDA) government, in its third consecutive term.