ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಎನ್‌ಕೌಂಟರ್ Archives » Dynamic Leader
October 17, 2024
Home Posts tagged ಎನ್‌ಕೌಂಟರ್
ಕ್ರೈಂ ರಿಪೋರ್ಟ್ಸ್

ಡಿ.ಸಿ.ಪ್ರಕಾಶ್

ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣದಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಲಾಗಿದ್ದ 11 ಮಂದಿಯಲ್ಲಿ ಒಬ್ಬನಾಗಿದ್ದ ರೌಡಿ ತಿರುವೆಂಗಟಂ ಎಂಬಾತನನ್ನು ಇಂದು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಬಹುಜನ ಸಮಾಜ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅನ್ನು ಜುಲೈ 5ರ ರಾತ್ರಿ ಪೆರಂಬೂರಿನ ಅವರ ನಿವಾಸದ ಬಳಿ ಆರು ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆ ಮಾಡಲಾಗಿತ್ತು. ಆ ನಂತರ, ಈ ಘಟನೆಗೆ ಸಂಬಂಧಿಸಿದಂತೆ ಸೆಂಬಿಯಂ ಪೊಲೀಸರು 11 ಜನರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ 11 ಮಂದಿಯಲ್ಲಿ ಒಬ್ಬನಾಗಿದ್ದ ರೌಡಿಯೇ 33 ವರ್ಷದ ತಿರುವೆಂಕಟಂ.

ಆರ್ಮ್ ಸ್ಟ್ರಾಂಗ್

ಏತನ್ಮಧ್ಯೆ, ತಿರುವೆಂಗಟಂನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು, ಪರಂಗಿಮಲೈ ಸಶಸ್ತ್ರ ಪಡೆಗಳ ಸಂಕೀರ್ಣದಲ್ಲಿ ವಿಚಾರಣೆ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಕೊಡುಂಗೈಯೂರ್ ಕಾನೂನು ಸುವ್ಯವಸ್ಥೆ ಇನ್ಸ್‌ಪೆಕ್ಟರ್ ಸರವಣನ್ ಅವರು ಇಂದು ಬೆಳಗ್ಗೆ ಮಾಧವರಂ ಅಡುತೊಟ್ಟಿ ಬಳಿ ತನಿಖೆಗಾಗಿ ಕರೆದುಕೊಂಡು ಹೋಗುತ್ತಿದ್ದಾಗ ರೌಡಿ ತಿರುವೆಂಗಟಂ ಪರಾರಿಯಾಗಿದ್ದನು ಎನ್ನಲಾಗುತ್ತಿದೆ.

ತರುವಾಯ, ತಂಡೈಯಾರ್‌ಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ಮುಹಮ್ಮದ್ ಬುಖಾರಿ ಮಾಧವರಂ ಆಡುತೊಟ್ಟಿ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ನಂತರ ರೌಡಿ ತಿರುವೆಂಗಟಂ ಪುಳಲ್ ವೆಜಿಟೇರಿಯನ್ ವಿಲೇಜ್ ಪ್ರದೇಶದ ಖಾಲಿ ಜಾಗದಲ್ಲಿ ಟಿನ್ ಶೆಡ್‌ನಲ್ಲಿ ತಲೆಮರೆಸಿಕೊಂಡಿರುವುದು ಬೆಳಕಿಗೆ ಬಂದಿತ್ತು.

ತಿರುವೆಂಗಟಂ ಎನ್‌ಕೌಂಟರ್ ಸ್ಪಾಟ್

ಇದಾದ ಬಳಿಕ ವಿಶೇಷ ಪಡೆ ಪೊಲೀಸರು ಟಿನ್ ಶೆಡ್ ಅನ್ನು ಸುತ್ತುವರಿದು ತಿರುವೆಂಗಟಂ ಅವರನ್ನು ಬಂಧಿಸಲು ಯತ್ನಿಸಿದ್ದಾರೆ. ಆಗ ತಿರುವೆಂಗಟಂ ತನ್ನ ಬಳಿಯಿದ್ದ ನಾಡ ಪಿಸ್ತೂಲ್ ನಿಂದ ಪೊಲೀಸರತ್ತ ಗುಂಡು ಹಾರಿಸಿದ್ದ ಎನ್ನಲಾಗಿದೆ. ಆಗ ಆತ್ಮರಕ್ಷಣೆಗಾಗಿ ಇನ್ಸ್​ಪೆಕ್ಟರ್​ ಮುಹಮ್ಮದ್ ಬುಖಾರಿ ತಿರುವೆಂಗಟಂ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ಆರೋಪಿಯ ಬಲ ಭಾಗದ ಹೊಟ್ಟೆ ಮತ್ತು ಎಡ ಭಾಗದ ಎದೆಗೆ ಗುಂಡುಗಳು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಕ್ಷಣ ಪೊಲೀಸರು ಆತನನ್ನು ರಕ್ಷಿಸಿ ಮಾಧವರಂನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆದರೆ ಅಲ್ಲಿ ತಪಾಸಣೆ ನಡೆಸಿದ ವೈದ್ಯರು ತಿರುವೆಂಗಟಂ ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ನಂತರ ತಿರುವೆಂಗಟಂ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಟಾನ್ಲಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸದ್ಯ ಅಲ್ಲಿ ಭಾರೀ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ತಿರುವೆಂಗಟಂ

ಅಲ್ಲದೆ, ತಿರುವೆಂಗಟಂ ಅವರ ಕ್ರಿಮಿನಲ್ ಹಿನ್ನೆಲೆಯ ಬಗ್ಗೆ ಪೊಲೀಸರು ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಆರ್ಮ್‌ಸ್ಟ್ರಾಂಗ್ ಆಪ್ತ ಬಾಮ್ ಸರವಣನ್ ಸಹೋದರ ತೆನ್ನರಸು ಹತ್ಯೆ ಪ್ರಕರಣದ ಮೊದಲ ಆರೋಪಿಯಾಗಿದ್ದಾನೆ. ಈತನ ವಿರುದ್ಧ 2014ರಲ್ಲಿ ಕುಂಡ್ರತ್ತೂರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಆರ್ಮ್‌ಸ್ಟ್ರಾಂಗ್ ಘಟನೆಯಲ್ಲಿ ನೇರವಾಗಿ ಚಾಕುವಿನಿಂದ ಇರಿದ ಅಪರಾಧಿಯೂ ಇವನೇ ಆಗಿದ್ದಾನೆ. ಸದ್ಯ ಈತನ ವಿರುದ್ಧ ಅಪಹರಣ, ಕೊಲೆ ಯತ್ನ ಪ್ರಕರಣಗಳು ಬಾಕಿ ಇವೆ.

ದೇಶ

ಡಿ.ಸಿ.ಪ್ರಕಾಶ್ ಸಂಪಾದಕರು

ಬಿಜೆಪಿ ಆಡಳಿತವಿರುವ ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ ಮತ್ತು ಜಿಲ್ಲಾ ಮೀಸಲು ಪಡೆ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 29 ನಕ್ಸಲೀಯರು ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ.

ಸಂಸತ್ತಿನ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನಕ್ಸಲ್ (ಮಾವೋವಾದಿ) ನಿರ್ಮೂಲನೆಗೆ ಕೇಂದ್ರ ಸರ್ಕಾರ ತೀವ್ರ ಪ್ರಯತ್ನ ನಡೆಸುತ್ತಿದೆ. ಈ ರೀತಿಯಾಗಿ, ಬಿಜೆಪಿ ಆಡಳಿತವಿರುವ ಛತ್ತೀಸ್‌ಗಢ ರಾಜ್ಯದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ ಮತ್ತು ಜಿಲ್ಲಾ ಮೀಸಲು ಪಡೆ ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 29 ನಕ್ಸಲೀಯರು ಎನ್‌ಕೌಂಟರ್‌ನಲ್ಲಿ ಹತರಾಗಿದ್ದಾರೆ.

ಗೃಹ ಸಚಿವಾಲಯದ ಪ್ರಕಾರ, ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ನಕ್ಸಲ್ ಉಗ್ರಗಾಮಿತ್ವವನ್ನು ಶೇ.70 ರಿಂದ ಶೇ.52ಕ್ಕೆ ಇಳಿಸಲಾಗಿದೆ. ಅಲ್ಲದೆ, ಭವಿಷ್ಯದಲ್ಲಿ ನಕ್ಸಲ್ ಮುಕ್ತ ಭಾರತ ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಾಖಂಡಿತವಾಗಿ ಹೇಳಿದ್ದಾರೆ.

ಈ ವರ್ಷದ ಆರಂಭದಿಂದ, ಗಡಿ ಭದ್ರತಾ ಪಡೆ (BSF), ಜಿಲ್ಲಾ ಮೀಸಲು ಪಡೆ (DRG) ಮತ್ತು ಕಮಾಂಡೋ ಬೆಟಾಲಿಯನ್ (COBRA) ಸೇರಿದಂತೆ ಸಶಸ್ತ್ರ ಪಡೆಗಳು ನಕ್ಸಲ್ ಪ್ರಭಾವಿತ ಛತ್ತೀಸ್‌ಗಢ ರಾಜ್ಯದ ಅರಣ್ಯಗಳಲ್ಲಿ ನಕ್ಸಲ್ ಹುಡುಕಾಟ ಮತ್ತು ಬೇಟೆಯಲ್ಲಿ ತೊಡಗಿವೆ.

ಈ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಅಂತ್ಯದಲ್ಲಿ ಛತ್ತೀಸ್‌ಗಢದ ಕಂಕೇರ್ ಅರಣ್ಯ ಪ್ರದೇಶದಲ್ಲಿ ನಕ್ಸಲರೆಂದು ಶಂಕಿಸಿ ಅಲೆದಾಡುತ್ತಿದ್ದ ಮೂವರನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದರು. ಆದರೆ, ಮೃತ ಮೂವರ ಕುಟುಂಬಗಳು ಮತ್ತು ಗ್ರಾಮಸ್ಥರು, ‘ನಾವು ಆದಿವಾಸಿಗಳು ಅರಣ್ಯವನ್ನು ಅವಲಂಬಿಸಿ ಬದುಕುತ್ತಿದ್ದೇವೆ.

ನಾವು ತೊಗಟೆ, ಎಲೆಗಳು ಮತ್ತು ಇತರ ಉತ್ಪನ್ನಗಳಿಗಾಗಿ ಕಾಡಿಗೆ ಹೋಗುತ್ತೇವೆ. ಹೀಗಾಗಿ ಎಲೆ ಸಂಗ್ರಹದ ಸೀಸನ್ ಶುರುವಾಗಿರುವುದರಿಂದ ಮೂವರೂ ಮರಗಳ ತೊಗಟೆಗಳು, ಕಾಂಡಗಳು ಸೇರಿದಂತೆ ವಸ್ತುಗಳಿಂದ ಹಗ್ಗಗಳನ್ನು ತಯಾರಿಸಲು ಕಾಡಿಗೆ ತೆರಳಿದ್ದರು. ಆದರೆ ಸರಕಾರಕ್ಕೆ ಲೆಕ್ಕ ಕೊಡಬೇಕು ಎಂಬುದಕ್ಕಾಗಿ ಮೂವರು ಅಮಾಯಕರನ್ನು ನಕ್ಸಲರು ಎಂದು ಆರೋಪಿಸಿ ಪೊಲೀಸರು ನಕಲಿ ಎನ್‌ಕೌಂಟರ್ ಮಾಡಿದ್ದಾರೆ’ ಎಂದು ಆರೋಪಿಸಿದರು.

ತರುವಾಯ, ಮಾರ್ಚ್ ಅಂತ್ಯದಲ್ಲಿ, ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಸಿಪುರಪಟ್ಟಿ ಅರಣ್ಯ ಪ್ರದೇಶದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ನಕ್ಸಲೀಯರು ಎಂದು ಶಂಕಿಸಿ ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದರು. ಈ ಕುರಿತು ಹೇಳಿಕೆ ನೀಡಿರುವ ನಕ್ಸಲ್ ಸಂಘಟನೆಯ ಕಾರ್ಯದರ್ಶಿ, ‘ಸತ್ತವರಲ್ಲಿ ಇಬ್ಬರು ಮಾತ್ರ ನಮ್ಮ ಸಂಘಟನೆಯ ಸದಸ್ಯರು. ಉಳಿದ ನಾಲ್ವರು ಗ್ರಾಮದ ನಾಗರಿಕರು.

ಜನರನ್ನು ಭೇಟಿ ಮಾಡಲು ಮತ್ತು ಅವರ ಕುಂದುಕೊರತೆಗಳನ್ನು ಆಲಿಸಲು ಗ್ರಾಮಕ್ಕೆ ಹೋದ ನಮ್ಮ ಇಬ್ಬರು ಸಂಘಟಕರು ಮತ್ತು ನಾಲ್ವರು ನಿರಾಯುಧ ನಾಗರಿಕರನ್ನು ಭದ್ರತಾ ಪಡೆಗಳು ಕರೆದೊಯ್ದು ವಿಚಾರಣೆಗೆ ಒಳಪಡಿಸಿ ನಂತರ ಅವರನ್ನು ಓಡಲುಬಿಟ್ಟು ಮನಬಂದಂತೆ ಗುಂಡಿಕ್ಕಿ ಕೊಂದಿದ್ದಾರೆ.

ಇದೊಂದು ನಕಲಿ ಎನ್‌ಕೌಂಟರ್, ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳು ಕೂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಜೋಡಿಸಿಟ್ಟಿದ್ದು’ ಎಂದು ಅವರು ಆರೋಪಿಸಿದ್ದಾರೆ. ಇದನ್ನು ಭದ್ರತಾ ಪಡೆ ನಿರಾಕರಿಸಿದೆ. ಈ ಹಿನ್ನಲೆಯಲ್ಲಿ, ನಕ್ಸಲರ ಹತ್ಯೆಯನ್ನು ಪ್ರತಿಭಟಿಸಲು ನಕ್ಸಲೀಯರು ಏಪ್ರಿಲ್ 3 ರಂದು ಸುಕ್ಮಾ ಮತ್ತು ಬಿಜಾಪುರದಲ್ಲಿ ಒಂದುದಿನದ ಬಂದ್ ಗೆ ಕರೆ ನೀಡಿದರು.

ಆ ಬಳಿಕ ನಕ್ಸಲರ ಬೇಟೆಯನ್ನು ಮತ್ತಷ್ಟು ತೀವ್ರಗೊಳಿಸಿದ ಸರ್ಕಾರ, ಹುಡುಕಾಟವನ್ನು ಮುಂದುವರಿಸಿತು. ನಕ್ಸಲರು ಬಂದ್ ಘೋಷಿಸಿದ ದಿನವೇ, ಛತ್ತೀಸ್‌ಗಢದ ಬಿಜಾಪುರದಲ್ಲಿ 13 ನಕ್ಸಲೀಯರನ್ನು ಎನ್‌ಕೌಂಟರ್‌ ಮಾಡಲಾಯಿತು. ತದನಂತರ, ಏಪ್ರಿಲ್ 6 ರಂದು ಕಂಕೇರ್‌ನಲ್ಲಿ ಇನ್ನೂ 3 ನಕ್ಸಲೀಯರನ್ನು ಕೊಲ್ಲಲಾಯಿತು.

ಇದೇ ಹಿನ್ನಲೆಯಲ್ಲಿ, ಕಂಕೇರ್ ಜಿಲ್ಲೆಯ ಹಪಟೋಲಾ ಅರಣ್ಯದಲ್ಲಿ ಏಪ್ರಿಲ್ 16ರಂದು ಗಡಿ ಭದ್ರತಾ ಪಡೆಗಳು 15 ಮಹಿಳೆಯರು ಸೇರಿದಂತೆ ಒಟ್ಟು 29 ನಕ್ಸಲೀಯರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಅದರಲ್ಲಿ, ಸರ್ಕಾರದಿಂದ ತಲಾ ರೂ.25 ಲಕ್ಷ ಘೋಷಣೆ ಮಾಡಿದ್ದ ನಕ್ಸಲ್ ಚಳುವಳಿಯ ಪ್ರಮುಖ ನಾಯಕ ಶಂಕರ್ ರಾವ್ ಕೂಡ ಕೊಲೆಯಾಗಿದ್ದಾರೆ.

ಅವರಿಂದ ಐದು ಎಕೆ-47 ರೈಫಲ್‌ಗಳು ಮತ್ತು ಎಲ್‌ಎಂಜಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತು ಮೃತರ 18 ಶವಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಭದ್ರತಾ ಪಡೆಗಳು ತಿಳಿಸಿವೆ. ಅಲ್ಲದೆ, ನಕ್ಸಲರೊಂದಿಗಿನ ಈ ಕಾಳಗದಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ವರ್ಷವೊಂದರಲ್ಲೇ ಇದುವರೆಗೆ 79 ನಕ್ಸಲೀಯರು ಹತರಾಗಿದ್ದಾರೆ ಮತ್ತು ಈ ನಿರ್ದಿಷ್ಟ ದಾಳಿಯು ದೇಶದಲ್ಲೇ ಅತ್ಯಂತ ಭೀಕರ ದಾಳಿಯಾಗಿದೆ ಎಂದು ಸರ್ಕಾರ ಹೇಳಿದೆ. ಹೀಗಾಗಿ ಈ ದಾಳಿಯ ಬಗ್ಗೆ ಮಾತನಾಡಿರುವ ಛತ್ತೀಸ್‌ಗಢ ಬಿಜೆಪಿ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ, “ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್ ಐತಿಹಾಸಿಕ ವಿಜಯವಾಗಿದೆ” ಎಂದು ಹೇಳಿದ್ದಾರೆ.

ಅದೇ ರೀತಿ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಅವರು “ಗಡಿ ಭದ್ರತಾ ಪಡೆಯ ಯೋಧರನ್ನು ಅಭಿನಂದಿಸುತ್ತೇನೆ. ಭವಿಷ್ಯದಲ್ಲಿ ನಕ್ಸಲ್ ಮುಕ್ತ ಛತ್ತೀಸ್‌ಗಢವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು! ಇದು ನಕ್ಸಲ್ ವಾದದ ವಿರುದ್ಧ ಛತ್ತೀಸ್‌ಗಢ ಪೊಲೀಸರು ನಡೆಸಿದ ಸರ್ಜಿಕಲ್ ಸ್ಟ್ರೈಕ್” ಎಂದು ಬಣ್ಣಿಸಿದ್ದಾರೆ.

ಹಾಗೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, “ದೇಶದಿಂದ ನಕ್ಸಲಿಸಂ ಮುಕ್ತಗೊಳಿಸಲು ಮೋದಿ ಸರಕಾರ ಬದ್ಧವಾಗಿದೆ. ಅಲ್ಲದೆ, ಛತ್ತೀಸ್‌ಗಢದ ಕಂಕೇರ್‌ನಲ್ಲಿ ಭದ್ರತಾ ಪಡೆಗಳ ಈ ಮಹಾನ್ ವಿಜಯವು ನಕ್ಸಲಿಸಂನ ಸಂಪೂರ್ಣ ನಿರ್ಮೂಲನೆಗೆ ಪ್ರಮುಖ ಹೆಜ್ಜೆಯಾಗಿದೆ!” ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ, ಛತ್ತೀಸ್‌ಗಢದ ಕಾಂಗ್ರೆಸ್‌ನ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಸಂಚಲನದ ಮಾಹಿತಿ ನೀಡಿದ್ದಾರೆ. ಅಂದರೆ “ಬಿಜೆಪಿ ಆಡಳಿತದಲ್ಲಿ ನಕಲಿ ಎನ್‌ಕೌಂಟರ್‌ಗಳು ಸರ್ವಸಾಮಾನ್ಯವಾಗಿ ನಡೆಯುತ್ತಿವೆ. ಅದರಲ್ಲೂ ಕಳೆದ ನಾಲ್ಕು ತಿಂಗಳಲ್ಲಿ ನಕಲಿ ಎನ್‌ಕೌಂಟರ್‌ಗಳ ಸಂಖ್ಯೆ ತೀವ್ರವಾಗಿ ಹೆಚ್ಚಿದೆ.

ಬಿಜೆಪಿ ಸರ್ಕಾರವು ಅನೇಕ ಮುಗ್ಧ ಬುಡಕಟ್ಟು ಗ್ರಾಮಸ್ಥರನ್ನು ‘ನಕ್ಸಲರು’ ಎಂದು ಬ್ರಾಂಡ್ ಮಾಡಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲುತ್ತಿದೆ. ಅಲ್ಲದೆ, ‘ಸುಳ್ಳು ಪ್ರಕರಣ’ ದಾಖಲಿಸಿ ಬಂಧಿಸುತ್ತೇವೆ ಎಂದು ಆದಿವಾಸಿಗಳಿಗೆ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ. ಕಂಕೇರ್ ಮಾತ್ರವಲ್ಲದೆ ಕವರ್ತಾ ಜಿಲ್ಲೆಯಲ್ಲೂ ಇಂತಹ ಘಟನೆಗಳನ್ನು ಕೇಳಿ ಬರುತ್ತಿವೆ!” ಎಂದು ಹೇಳಿ ಸಂಚಲನ ಮೂಡಿಸಿದ್ದಾರೆ.

ದೇಶ

ಫೆಬ್ರವರಿ 24 ರಂದು ಉಮೇಶ್ ಪಾಲ್ ಹತ್ಯೆಯ ನಂತರ ಇದು ಮೂರನೇ ಎನ್‌ಕೌಂಟರ್ ಆಗಿದೆ!

ಆದಿಕ್ ಅಹ್ಮದ್ ಅವರ 19 ವರ್ಷದ ಮಗ ಅಸದ್ ಅಹ್ಮದ್ ಮತ್ತು ಅವರ ಸಹಾಯಕ ಹತ್ಯೆಯು ಉತ್ತರ ಪ್ರದೇಶದಲ್ಲಿ 2017 ರಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಅಧಿಕಾರ ವಹಿಸಿಕೊಂಡ ನಂತರ ನಡೆದ 183ನೇ ಎನ್‌ಕೌಂಟರ್ ಆಗಿದೆ. ಫೆಬ್ರವರಿ 24 ರಂದು ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಇದು ಮೂರನೇ ಎನ್‌ಕೌಂಟರ್ ಆಗಿದೆ. ಏಪ್ರಿಲ್‌ನಿಂದ 13 ದಿನಗಳಲ್ಲಿ ಉತ್ತರ ಪ್ರದೇಶ ಪೊಲೀಸರು ನಡೆಸಿದ ಮೂರನೇ ಎನ್‌ಕೌಂಟರ್ ಇದಾಗಿದೆ.

ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿನಿಂದ ಇಂತಹ ಎನ್‌ಕೌಂಟರ್‌ಗಳು ನಡೆಯುತ್ತಲೇ ಇವೆ. ಯೋಗಿ ಅಧಿಕಾರ ಸ್ವೀಕರಿಸಿದ ಎರಡು ವಾರಗಳಲ್ಲಿ ಕುಖ್ಯಾತ ರೌಡಿ ಗುರ್ಮೀತ್ ಕೊಲ್ಲಲ್ಪಟ್ಟನು. ಮುಖ್ಯಮಂತ್ರಿಗಳ ಪಾಲಿಗೆ ಇದು ಅಪರಾಧ ನಿಗ್ರಹದ ಶೈಲಿ. ಇದು ನಿರೋಧಕ ಎಂದು ಅವರು ನಂಬುತ್ತಾರೆ.

ಏತನ್ಮಧ್ಯೆ, ಅಪರಾಧ ಮತ್ತು ಅಪರಾಧಿಗಳನ್ನು ನಿರ್ಮೂಲನೆ ಮಾಡುವ ಭರವಸೆಯ ಮೇಲೆ 2017 ರಿಂದ ಇದು 183ನೇ ಎನ್‌ಕೌಂಟರ್ ಹತ್ಯೆಯಾಗಿದೆ ಎಂದು ವಿಶೇಷ ಡಿಜಿ ಅಪರಾಧ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಪ್ರಶಾಂತ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು. ಈ ಹಿನ್ನಲೆಯಲ್ಲಿ ಝಾನ್ಸಿಯ ಪಟಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಪರಿಚ್ಚಾ ಡ್ಯಾಮ್ ಬಳಿ ಅಸದ್ ಅಹ್ಮದ್ ಮತ್ತು ಗುಲಾಂ ಹುಸೇನ್ ಅವರನ್ನು ಕೊಲ್ಲಲಾಯಿತು.

ಅಧಿಕೃತ ಮಾಹಿತಿಯ ಪ್ರಕಾರ 183 ಕೊಲೆಗಳ ಹೊರತಾಗಿ, ಪೊಲೀಸ್ ಕಾರ್ಯಾಚರಣೆಯಲ್ಲಿ ಗಾಯಗೊಂಡ 5,046 ಅಪರಾಧಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದಲ್ಲಿ ಕ್ರಿಮಿನಲ್‌ಗಳ ಕಾಲಿಗೆ ಗುಂಡಿಕ್ಕಿ ಕೊಲ್ಲುವ ಎನ್‌ಕೌಂಟರ್‌ಗಳು, ಪೊಲೀಸರಲ್ಲಿ ಮಾತ್ರವಲ್ಲ, ಅಧಿಕಾರದ ಕಾರಿಡಾರ್‌ಗಳಲ್ಲಿಯೂ ಇದನ್ನು ‘ಆಪರೇಷನ್ ಲಾಂಗ್ಡಾ’ ಎಂದು ಕರೆಯಲಾಗುತ್ತದೆ.

ಕಳೆದ ಆರು ವರ್ಷಗಳಲ್ಲಿ ಇಂತಹ ಕಾರ್ಯಾಚರಣೆಯಲ್ಲಿ 13 ಪೊಲೀಸರು ಸಾವನ್ನಪ್ಪಿದ್ದಾರೆ. ಅಲ್ಲದೆ, ಅಧಿಕೃತ ವರದಿಗಳ ಪ್ರಕಾರ 1,443 ಪೊಲೀಸರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎನ್‌ಕೌಂಟರ್‌ಗೂ ಮುನ್ನ ಉಮೇಶ್ ಪಾಲ್ ಫೆಬ್ರವರಿ 25 ರಂದು ಕೊಲ್ಲಲ್ಪಟ್ಟರು. ಆಗ ಯೋಗಿ ಆದಿತ್ಯನಾಥ್ ಕ್ರಿಮಿನಲ್ ಗಳನ್ನು ಮಟ್ಟಹಾಕಲಾಗುವುದು ಎಂದಿದ್ದರು.

ಅದರಂತೆ ಈ ಎನ್ ಕೌಂಟರ್ ನಡೆದಿದೆ. ಅಂಕಿ ಅಂಶಗಳ ಪ್ರಕಾರ, ಯೋಗಿ ಆಡಳಿತದಲ್ಲಿ 2018ರಲ್ಲಿ ಹೆಚ್ಚಿನ ಎನ್‌ಕೌಂಟರ್‌ಗಳು ನಡೆದಿವೆ. ಅದರ ನಂತರ 2022ರಲ್ಲಿ ಹೆಚ್ಚಿನ ಎನ್‌ಕೌಂಟರ್‌ಗಳು ನಡೆದಿರುವುದು ಗಮನಾರ್ಹ. The Uttar Pradesh government has adopted a zero-tolerance policy against the mafia, Prashant Kumar, Special DG, Law & Order said at a media briefing today. “The result of this policy is before everyone today,” he said, adding that 183 criminals have been killed so far in encounters with the police in the state.