ಕಳೆದ ಭಾನುವಾರ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಯಲ್ಲಿ ಉಗ್ರರಿಂದ ಹತ್ಯೆಯಾದ ಸಂಜಯ್ ಶರ್ಮಾ ಪಾರ್ಥಿವ ಶರೀರಕ್ಕೆ ಮುಸ್ಲಿಮರಿಂದ ಅಂತಿಮ ಸಂಸ್ಕಾರ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಅಲ್ಪಸಂಖ್ಯಾತ ಹಿಂದೂ ಪಂಡಿತ್ ಸಮುದಾಯವನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ದಾಳಿಯ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಭಯೋತ್ಪಾದಕ ದಾಳಿಯನ್ನು ತಡೆಯಲು ಭದ್ರತಾ ಪಡೆಗಳು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಕಳೆದ ಭಾನುವಾರ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಸಂಜಯ್ ಶರ್ಮಾ (ವಯಸ್ಸು 40) ಎಂಬುವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದರು.
ಈ ಹಿನ್ನಲೆಯಲ್ಲಿ ಕಳೆದ ಭಾನುವಾರ ಉಗ್ರರ ಗುಂಡಿಗೆ ಬಲಿಯಾದ ಹಿಂದೂ ಪಂಡಿತ್ ಸಮುದಾಯಕ್ಕೆ ಸೇರಿದ ಶರ್ಮಾ ಅವರ ಪಾರ್ಥಿವ ಶರೀರಕ್ಕೆ ಮುಸ್ಲಿಮರು ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ. ಈ ಪ್ರದೇಶದಲ್ಲಿ ವಾಸಿಸುತ್ತಿದ್ದ ಏಕೈಕ ವ್ಯಕ್ತಿ ಸಂಜಯ್ ಶರ್ಮಾ. ಆದ್ದರಿಂದ ಆ ಪ್ರದೇಶದ ಮುಸ್ಲಿಮರು ಅವರ ಅಂತಿಮ ವಿಧಿಗಳನ್ನು ನಡೆಸಲು ಸಹಾಯ ಮಾಡಿದ್ದಾರೆ. ‘ಈ ಪ್ರದೇಶದ ಮುಸ್ಲಿಮರು ಸೂಕ್ತ ಸಮಯದಲ್ಲಿ ಸಾಕಷ್ಟು ಸಹಾಯ ಮಾಡಿದ್ದಾರೆ’ ಎಂದು ಸಂಜಯ್ ಶರ್ಮಾ ಸಂಬಂಧಿಕರು ಹೇಳಿದ್ದಾರೆ.