ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಕೋಮುವಾದ Archives » Dynamic Leader
October 16, 2024
Home Posts tagged ಕೋಮುವಾದ
ರಾಜಕೀಯ

ಹೈದರಾಬಾದ್: ತಮಿಳುನಾಡಿನಲ್ಲಿರುವ ಹಿಂದೂ ದೇವಾಲಯಗಳನ್ನು ಡಿಎಂಕೆ ಸರ್ಕಾರ ಅತಿಕ್ರಮಣ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಡಿರುವ ಬಹಿರಂಗ ಆರೋಪ ದೇಶಾದ್ಯಂತ ಸಂಚಲನ ಮೂಡಿಸಿದೆ. ಬಿಜೆಪಿ ಈಗಾಗಲೇ ‘ಸನಾತನ’ ವಿಚಾರದಲ್ಲಿ ಡಿಎಂಕೆ ವಿರುದ್ಧ ಭಾರತದಾದ್ಯಂತ ಪ್ರಚಾರ ನಡೆಸುತ್ತಿದ್ದು, ಈ ಆರೋಪವನ್ನು ಪ್ರಧಾನಿ ಮೋದಿ ಸಾರ್ವಜನಿಕವಾಗಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ತೆಲಂಗಾಣ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ತೆಲಂಗಾಣದಲ್ಲಿ ಆಡಳಿತಾರೂಢ ಭಾರತೀಯ ರಾಷ್ಟ್ರ ಸಮಿತಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ತೆಲಂಗಾಣದಲ್ಲಿ ಇಲ್ಲಿಯವರೆಗೆ ನೆಲೆ ಸ್ಥಾಪಿಸದ ಬಿಜೆಪಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಗಮನಾರ್ಹ ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ಇದರಿಂದ ತೆಲಂಗಾಣದಲ್ಲಿ ಈ ಬಾರಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಬಿಜೆಪಿ ಕಸರತ್ತು ನಡೆಸುತ್ತಿದೆ.

ಇದನ್ನೂ ಓದಿ: ಸ್ಥಳೀಯ ಅಧಿಕಾರಿಗಳ ಕುಮ್ಮಕ್ಕಿನಿಂದ ದಲಿತ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಬಹಿಷ್ಕಾರ!

ಆ ನಿಟ್ಟಿನಲ್ಲಿ ಇಂದು ತೆಲಂಗಾಣದ ನಿಜಾಮಾಬಾದ್‌ನಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಭಾಷಣ ಮಾಡಿದರು. ತಮ್ಮ ಭಾಷಣದ ಭಾಗವಾಗಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಸರ್ಕಾರವನ್ನೂ ಮೋದಿ ಟೀಕಿಸಿ ಮಾತನಾಡಿದರು.

“ತಮಿಳುನಾಡಿನಲ್ಲಿ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಹಿಂದೂ ಜನರ ಜೀವ ಉಸಿರಾದ ಸನಾತನ ಧರ್ಮ ನಾಶವಾಗಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಸಾರ್ವಜನಿಕವಾಗಿ ಹೇಳುತ್ತಿದ್ದಾರೆ. ಅದರ ಭಾಗವಾಗಿ ತಮಿಳುನಾಡಿನಲ್ಲಿ ಹಿಂದೂ ದೇವಾಲಯಗಳನ್ನು ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಂಡಿದೆ. ಹಿಂದೂ ದೇವಾಲಯಗಳನ್ನು ತಮಿಳುನಾಡು ಸರ್ಕಾರ ವಶಪಡಿಸಿಕೊಂಡಿದೆ. ಇದು ಅತ್ಯಂತ ದೊಡ್ಡ ಅರಾಜಕತೆ.

ಇದನ್ನೂ ಓದಿ: 19 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ: ಅಕ್ಟೋಬರ್ 14 ರಂದು ಅಮೇರಿಕಾದಲ್ಲಿ ಅನಾವರಣ!

ಹಿಂದೂ ದೇವಾಲಯಗಳ ನಿಯಂತ್ರಣದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ದನಿಯೆತ್ತಿದೆ? ಕಾಂಗ್ರೆಸಿಗೆ ಧೈರ್ಯವಿದ್ದರೆ ಅವರು ತಮಿಳುನಾಡಿನಲ್ಲಿ ಹಾಗೆ ಹೇಳಲು ಸಾಧ್ಯವೇ? ನೀವು (ಕಾಂಗ್ರೆಸ್) ಡಿಎಂಕೆ ಸರ್ಕಾರದ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ; ಹಾಗಾಗಿ ಹಿಂದೂ ದೇವಾಲಯಗಳ ನಿರ್ವಹಣೆಯಿಂದ ಸರ್ಕಾರ ಹಿಂದೆ ಸರಿಯಬೇಕು ಎಂದು ನೀವು ಡಿಎಂಕೆಗೆ ಹೇಳಬೇಕು” ಎಂದು ಮೋದಿ ಹೇಳಿದಾರೆ.