ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ಚುನಾವಣೆ Archives » Page 2 of 2 » Dynamic Leader
November 21, 2024
Home Posts tagged ಚುನಾವಣೆ (Page 2)
ರಾಜಕೀಯ

ತಿರುವನಂತಪುರಂ: ಕೇರಳ ರಾಜ್ಯದ ಕೊಚ್ಚಿಯ ತಿರುವನಂತಪುರಂನಲ್ಲಿ ಕಾರಿನಲ್ಲಿ ನಿಂತು ಪ್ರಯಾಣಿಸಿದ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಮೋಟಾರು ವಾಹನ ಇಲಾಖೆಗೆ ದೂರು ನೀಡಲಾಗಿದೆ. ಏಪ್ರಿಲ್ 24 ಮತ್ತು 25 ರಂದು ಪ್ರಧಾನಿ ಮೋದಿಯವರು ಕೇರಳ ಪ್ರವಾಸ ಕೈಗೊಂಡಿದ್ದರು. ಕೊಚ್ಚಿ ಮತ್ತು ತಿರುವನಂತಪುರಂನಲ್ಲಿ ರೋಡ್ ಶೋ ನಡೆಸುವಾಗ ಕಾರಿನ ಬಾಗಿಲು ತೆರೆದು ನಿಂತು ಪ್ರಯಾಣಿಸಿದರು. ಇದು ಕೇರಳದಲ್ಲಿ ವಿವಾದಕ್ಕೆ ಕಾರಣವಾಗಿದೆ.

ತ್ರಿಶೂರ್ ಬಳಿಯ ತಿರುವಿಳ್ವಾಮಲೈ ನಿವಾಸಿ ಜಯಕೃಷ್ಣನ್ ಕೇರಳ ಡಿಜಿಪಿ ಅನಿಲ್ ಕಾಂತ್ ಹಾಗೂ ಮೋಟಾರು ವಾಹನ ಇಲಾಖೆಗೆ ದೂರು ನೀಡಿದ್ದಾರೆ. ಸದರಿಯವರ ದೂರಿನಲ್ಲಿ, ‘ಮೋಟಾರು ವಾಹನ ಕಾಯ್ದೆಯ ಪ್ರಕಾರ ಕಾರಿನ ಬಾಗಿಲು ತೆರೆದುಕೊಂಡು ವಾಹನ ಚಲಾಯಿಸುವುದು ಅಪರಾಧ. ಇತ್ತೀಚೆಗೆ ಕೊಚ್ಚಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ, ಕಾರಿನ ಬಾಗಿಲು ತೆರೆದುಕೊಂಡು ನಿಂತು ಪ್ರಯಾಣಿಸಿದರು. ಡ್ರೈವರ್ ಕಣ್ಣನ್ನು ಮರೆಮಾಚುವ ರೀತಿಯಲ್ಲಿ ಕಾರ್ ಮುಂದಿನ ಕನ್ನಡಿಯಾದ್ಯಂತ ಹೂಗಳು ಕಾಣಲ್ಪಟ್ಟವು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಹಾಗಾಗಿ ಕಾನೂನು ಉಲ್ಲಂಘಿಸಿರುವ ಪ್ರಧಾನಿ ಮೋದಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಜಯಕೃಷ್ಣನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದರ ಬಗ್ಗೆ ಜಯಕೃಷ್ಣನ್ ಮಾತನಾಡುವಾಗ, ‘ನಮ್ಮ ದೇಶದಲ್ಲಿ ಕಾನೂನು ಎಲ್ಲರಿಗೂ ಸಾಮಾನ್ಯವಾಗಿದೆ. ಇದರಿಂದ ಯಾರಿಗೂ ವಿನಾಯಿತಿ ನೀಡಲಾಗುವುದಿಲ್ಲ. ಪ್ರಧಾನಿ ಮೋದಿ ಕಾನೂನು ಉಲ್ಲಂಘಿಸಿದ್ದಾರೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸರು ಹಾಗೂ ಮೋಟಾರು ವಾಹನ ಇಲಾಖೆ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ಎಂದು ಅವರು ಹೇಳಿದ್ದಾರೆ.

ಬೈಕ್ ವ್ಹೀಲಿಂಗ್ ಮಾಡಿದರೆ ಅಪರಾಧ; ಬಸ್‌ನಲ್ಲಿ ಫುಟ್ ಬೋರ್ಡ್ ಹೊಡೆದರೆ ಅಪರಾಧ; ಆದರೆ, ಪ್ರಧಾನಿ ನರೇಂದ್ರ ಮೋದಿ ಕಾರಿನಲ್ಲಿ ನಿಂತು ಪ್ರಯಾಣಿಸಿದರೆ ಅದು ಮಾತ್ರ ಅಪರಾಧವಲ್ಲ?  

ರಾಜಕೀಯ

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಇಂದು ನಾಮ ಪತ್ರ ಸಲ್ಲಿಸಿದ್ದಾರೆ!

ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮ ಪತ್ರವನ್ನು ಸಲ್ಲಿಸಿದ್ದಾರೆ. ಪಕ್ಷದ ಕಾರ್ಯಕರ್ತರು ಹಾಗೂ ಅಪಾರವಾದ ಅಭಿಮಾನಿಗಳೊಂದಿಗೆ ತೆರಳಿದ ಅವರು ವಸಂತನಗರ ಬಿಬಿಎಂಪಿ ಕಛೇರಿಯಲ್ಲಿ ತಮ್ಮ ನಾಮ ಪತ್ರವನ್ನು ಸಲ್ಲಿಸಿದರು.

“ಬೇಷರತ್ ಬೆಂಬಲಕ್ಕಾಗಿ ನಾನು ಜನರಿಗೆ ಧನ್ಯವಾದ ಹೇಳುತ್ತೇನೆ ಮತ್ತು ಇನ್ನೊಂದು ಅವಧಿಗೆ ನಾನು ಸೇವೆ ಸಲ್ಲಿಸಲು ಆಶಿಸುತ್ತೇನೆ” ಎಂದು ಕ್ಷೇತ್ರದ ಮತದಾರಲ್ಲಿ ವಿನಮ್ರತೆಯಿಂದ ಮನವಿ ಮಾಡಿದ್ದಾರೆ. 

“ಸೌಮ್ಯವಾದಿ ಹಾಗೂ ಶಾಂತಿ ಪ್ರಿಯನಾದ ರಿಜ್ವಾನ್ ಅರ್ಷದ್ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸಗಳೇ ಅವರಿಗೆ ಈ ಬಾರಿಯೂ ಜಯವನ್ನು ತಂದು ಕೊಂಡುತ್ತದೆ” ಎಂದು ಕ್ಷೇತ್ರದ ಜನ ಹೇಳಿಕೊಳ್ಳುತ್ತಿದ್ದಾರೆ.

ರಾಜಕೀಯ

ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್, ಜಾತ್ಯತೀತ ಜನತಾದಳ ಮತ್ತು ಆಮ್ ಆದ್ಮಿ ಪಕ್ಷಗಳು ಕಣದಲ್ಲಿವೆ.

ಈ ಹಿನ್ನಲೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಈ ಬಾರಿಯ ಚುನಾವಣೆಯಲ್ಲಿ ಜಯಭೇರಿ ಬಾರಿಸಿ, ಆಡಳಿತವನ್ನು ಉಳಿಸಿಕೊಳ್ಳಲು ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಅದರಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ದಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕ ಚುನಾವಣಾ ಉಸ್ತುವಾರಿಯಾಗಿ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರನ್ನು ಸಹ ಉಸ್ತುವಾರಿಯಾಗಿ ನೇಮಿಸಿ ಘೋಷಣೆ ಮಾಡಿದರು.

ಈ ಬಗ್ಗೆ ತಮಿಳುನಾಡು ಬಿಜೆಪಿ ಕಡೆಯಿಂದ ವಿಚಾರಿಸಿದಾಗ, ‘ಕರ್ನಾಟಕದಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು, ಬಿಜೆಪಿ ವರಿಷ್ಟರು ಶತಪ್ರಯತ್ನ ಪಡುತ್ತಿದ್ದಾರೆ. ಇದಕ್ಕಾಗಿ ನಾನಾ ರೀತಿಯ ಕಾರ್ಯ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಇದರ ಮುಂದುವರಿದ ಭಾಗವಾಗಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಯನ್ನು ಅವರ ಕೆಳಗೆ ನೇಮಿಸಿದೆ. ಇದು ಅಣ್ಣಾಮಲೈ ಅವರನ್ನು ಶೀಘ್ರದಲ್ಲೇ ಅಧ್ಯಕ್ಷ ಸ್ಥಾನದಿಂದ ಅಥವಾ ತಮಿಳುನಾಡಿನಿಂದ ಸ್ಥಳಾಂತರಿಸುವ ಸೂಚನೆಯಾಗಿದೆ’ ಎಂದು ಅವರು ಹೇಳುತ್ತಿದ್ದಾರೆ.

ಅನುಭವವಿಲ್ಲದ, ರಾಜಕೀಯ ತಂತ್ರಗಾರಿಕೆ ಗೊತ್ತಿಲ್ಲದ ಮಾಜಿ ಐಪಿಎಸ್ ಅಧಿಕಾರಿ ‘ಶಾರ್ಟ್ ಟೆಂಪರ್’ ಅಣ್ಣಾಮಲೈಯನ್ನು ಇಲ್ಲಿಗೆ ಏಕೆ ಸಹ ಉಸ್ತುವಾರಿಯಾಗಿ ನೇಮಿಸುತ್ತಿದ್ದಿರಿ ಎಂದು ಕರ್ನಾಟಕ ಬಿಜೆಪಿಯವರು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ತಮಿಳುನಾಡು ರಾಜಕೀಯದಲ್ಲಿ ತನ್ನನ್ನು ಉತ್ಸಾಹಿಯಾಗಿ ತೋರಿಸಿಕೊಳ್ಳುತ್ತಿದ್ದ ಅಣ್ಣಾಮಲೈಕೂಡ ತಮ್ಮನ್ನು ಏಕೆ ಕರ್ನಾಟಕಕ್ಕೆ ಸಹ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ ಎಂಬ ಗೊಂದಲದಲ್ಲಿ ಇದ್ದಾರೆ.

ದೇಶ

ನವದೆಹಲಿ: ಮುಂದಿನ ವರ್ಷ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆ ಎದುರಿಸಲು ಎಲ್ಲ ಪಕ್ಷಗಳು ಈಗಾಗಲೆ ಸಿದ್ದತೆಗಳನ್ನು ನಡೆಸಿಕೊಂಡು ಬರುತ್ತಿವೆ. ಸದ್ಯ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ಜನತಾ ಪಕ್ಷವು ಕೂಡ 3ನೇ ಅವಧಿಗೆ ಅಧಿಕಾರ ಹಿಡಿಯಲು ತಂತ್ರಗಳನ್ನು ರೂಪಿಸುತ್ತಿದೆ.

ಭಾರತೀಯ ಜನತಾ ಪಾರ್ಟಿ ವಿಶೇಷವಾಗಿ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿಯ ಪರವಾಗಿ ಹೆಚ್ಚುವರಿ ಕ್ಷೇತ್ರಗಳನ್ನು ಗೆಲ್ಲಲು ಮುಂದಾಗಿದೆ. ಇದಕ್ಕಾಗಿ ನಾಯಕರು ರಣತಂತ್ರ ರೂಪಿಸುತ್ತಿದ್ದಾರೆ. ಅದರ ಭಾಗವಾಗಿಯೇ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ಧಿಯನ್ನು ಹರಿಯಬಿಟ್ಟಿದ್ದಾರೆ.

ಪ್ರಧಾನಿ ಮೋದಿ ಉತ್ತರದಲ್ಲಿ ಒಂದು ಹಾಗೂ ದಕ್ಷಿಣ ರಾಜ್ಯದಲ್ಲಿ ಒಂದು ಕ್ಷೇತ್ರಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದು, ದಕ್ಷಿಣ ರಾಜ್ಯದ ತಮಿಳುನಾಡಿನಿಂದಲೇ ಅವರು ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸುವುದಾದರೆ ರಾಮನಾಥಪುರಂ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಜನತಾ ಪಕ್ಷದ ತಮಿಳುನಾಡು ಅಧ್ಯಕ್ಷ ಅಣ್ಣಾಮಲೈ ಅವರನ್ನು ಕೇಳಿದಾಗ, ‘ಪ್ರಧಾನಿ ನರೇಂದ್ರ ಮೋದಿ ವಿದೇಶಿಯಲ್ಲ; ಆತ ಭಾರತೀಯ. ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು. ನಾಡಿನ ಜನ ಅವರ ಮೇಲೆ ಪ್ರೀತಿ, ಮಮತೆ ಹೊಂದಿದ್ದಾರೆ. ಅಷ್ಟೇ ಅಲ್ಲ ಮುಂದಿನ ಸಂಸತ್ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳೂ ಕೇಳಿಬರುತ್ತಿವೆ.

ಇದು ನಿಜವೇ ಎಂದು ಅನೇಕರು ನನ್ನನ್ನು ಪ್ರಶ್ನಿಸುತ್ತಿದ್ದಾರೆ. ಕಳೆದ 2 ದಿನಗಳ ಹಿಂದೆ ನಾನು ತೂತ್ತುಕುಡಿಗೆ ಹೋಗಿದ್ದೆ. ಅಲ್ಲಿನ ಅಂಗಡಿಯೊಂದರಲ್ಲಿ ಟೀ ಕುಡಿಯಲು ಹೋಗಿದ್ದಾಗ, ನನ್ನನ್ನು ನೋಡಿದ ಅಲ್ಲಿನ ಜನರು, ಪ್ರಧಾನಿ ಮೋದಿ ತಮಿಳುನಾಡಿನಲ್ಲಿ ಸ್ಪರ್ಧಿಸುತ್ತಾರೆಯೇ? ಎಂದು ಕೇಳಿದರು.

ಇದನ್ನು ತಿಳಿದುಕೊಳ್ಳಲು ಜನರು ತುಂಬಾ ಆಸಕ್ತಿ ಹೊಂದಿದ್ದಾರೆ. ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷವನ್ನು ಬಲಿಷ್ಠಗೊಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ.

ತಮಿಳುನಾಡಿನ ಜನರು ಪ್ರಧಾನಿ ಮೋದಿಯನ್ನು ಅತಿಯಾಗಿ ಪ್ರೀತಿಸುತ್ತಿದ್ದಾರೆ. ಅವರ ಚಟುವಟಿಕೆಗಳನ್ನು ಮೆಚ್ಚುತ್ತಾರೆ. ತಮಿಳುನಾಡಿನಲ್ಲೂ ಪ್ರಧಾನಿ ಮೋದಿಯ ಅಲೆ ಎದ್ದಿದೆ. ತಮಿಳುನಾಡಿನಲ್ಲೂ ಭಾರತೀಯ ಜನತಾ ಪಕ್ಷಕ್ಕೆ ಪ್ರತ್ಯೇಕ ಗುರುತು ಸಿಗಬೇಕು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಇದನ್ನು ನಾವು ಸಾಬೀತು ಮಾಡುತ್ತೇವೆ’ ಎಂದರು.

ದೇಶ

ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಗೆ ಗೆಲುವಿನ ರಣತಂತ್ರ ರೂಪಿಸುವುದು, ಗಡಿ ಗ್ರಾಮಗಳಲ್ಲಿ ಭದ್ರತೆಯನ್ನು ಬಲಪಡಿಸುವುದು ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ಮುಕ್ತಾಯದ ದಿನವಾದ ಇಂದು ಪ್ರಮುಖವಾಗಿ ಚರ್ಚಿಸಲಾಯಿತು ಎಂದು ತಿಳಿದು ಬಂದಿದೆ.

ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ ನಿನ್ನೆ ನವದೆಹಲಿಯಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಟ್ಟಾ ಮತ್ತು 350 ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಿದ್ದರು.

ಮುಂದಿನ ವರ್ಷ ಲೋಕಸಭೆ ಚುನಾವಣೆ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಮೇಘಾಲಯ, ನಾಗಾಲ್ಯಾಂಡ್, ತ್ರಿಪುರ, ಮಿಜೋರಾಂ, ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಗಳು ನಡೆಯಲಿವೆ.

ಇಂದಿನ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ಮುಂಬರುವ 2024ರ ಲೋಕಸಭೆ ಚುನಾವಣೆಗೆ 400 ದಿನಗಳು ಬಾಕಿಯಿದ್ದು, ನಾವು ಈಗಲೇ ತಯಾರಿ ಮಾಡಿಕೊಳ್ಳಬೇಕಾಗಿದೆ. ಸರ್ಕಾರದ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯಲು ನೂತನ ಪದಾಧಿಕಾರಿಗಳ ನೇಮಕ ಅಗತ್ಯವಾಗಿದೆ. ಯುವ ಮತದಾರರನ್ನು ಸೆಳೆಯುವುದು ಮತ್ತು ವಿಶೇಷವಾಗಿ ಗಡಿ ಗ್ರಾಮಗಳಲ್ಲಿ ಭದ್ರತೆ ಹಾಗೂ ಪಕ್ಷದ ಬಲವರ್ಧನೆಯನ್ನು ಗುರಿಯಾಗಿಸಿಕೊಂಡು ಕಾರ್ಯನಿರ್ವಹಿಸಲು ಬದ್ದರಾಗಿರಬೇಕು’ ಎಂದು ಹೇಳಿರುವುದಾಗಿ ಬಿಜೆಪಿಯ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ದೇಶ

ಹೊಸದಿಲ್ಲಿ: ಕಾಶ್ಮೀರದಲ್ಲಿ ಭಾರತ ಜೋಡೋ ಯಾತ್ರೆ ನಡೆಸುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಲವೆಡೆ ಪಾದಯಾತ್ರೆಯನ್ನು ತಪ್ಪಿಸಿ, ವಾಹನದಲ್ಲಿ ಹೋಗುವಂತೆ ಕೇಂದ್ರ ಗುಪ್ತಚರ ಮತ್ತು ಭದ್ರತಾ ಸಂಸ್ಥೆಗಳು ಎಚ್ಚರಿಕೆ ನೀಡಿವೆ ಎಂಬ ವರದಿಗಳು ಹೊರಬಿದ್ದಿವೆ. ರಾಹುಲ್ ಗಾಂಧಿ ಅವರ ಪ್ರಯಾಣದ ಮಾರ್ಗ ಮತ್ತು ರಾತ್ರಿಯ ವಾಸ್ತವ್ಯದ ಭದ್ರತಾ ಅಂಶಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಳೆದ ವರ್ಷ ಸೆಪ್ಟೆಂಬರ್ 7ರಂದು ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಿಂದ ಭಾರತ ಜೋಡೋ ಯಾತ್ರೆ ಆರಂಭಿಸಿದ್ದರು. ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ. ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಪಂಜಾಬ್, ಹರಿಯಾಣ ಮುಂತಾದ ಹಲವು ರಾಜ್ಯಗಳಲ್ಲಿ ಯಾತ್ರೆ ಕೈಗೊಂಡಿರುವ ಅವರು ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರೆ ಕೈಗೊಳ್ಳಲಿದ್ದಾರೆ.

ಜನವರಿ 19ರಂದು ರಾಹುಲ್ ಗಾಂಧಿ ಲಕ್ಕನ್‌ಪುರ ಪ್ರವೇಶಿಸಲಿದ್ದಾರೆ. ರಾತ್ರಿ ಅಲ್ಲೇ ಇದ್ದು ಮರುದಿನ ಬೆಳಗ್ಗೆ ಕಥುವಾಗೆ ಹೊರಡುತ್ತಾರೆ. ನಂತರ ರಾತ್ರಿ ಚಟ್ವಾಲ್ ನಲ್ಲಿ ತಂಗುತ್ತಾರೆ. ಜನವರಿ 21 ರಂದು ಬೆಳಿಗ್ಗೆ ಹೀರಾನಗರದಿಂದ ಡ್ಯೂಕರ್ ಹವೇಲಿ ವರೆಗೆ ಪಾದಯಾತ್ರೆ ನಡೆಯಲಿದೆ. ಜನವರಿ 22 ರಂದು ವಿಜಯಪುರದಿಂದ ಸತ್ವಾರಿಗೆ ಪಾದಯಾತ್ರೆ ಮುನ್ನಡೆಯಲಿದೆ.

ಜನವರಿ 25 ರಂದು ರಾಹುಲ್ ಗಾಂಧಿ ಅವರು ಕಾಶ್ಮೀರದ ಬನಿಹಾಲ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ, ನಂತರ ಅನಂತನಾಗ್ ಜಿಲ್ಲೆಯ ಮೂಲಕ ಪ್ರಯಾಣಿಸಿ 2 ದಿನಗಳಲ್ಲಿ ಶ್ರೀನಗರವನ್ನು ತಲುಪಲಿದ್ದಾರೆ. ಶ್ರೀನಗರಕ್ಕೆ ಭೇಟಿ ನೀಡಿದಾಗ ರಾಹುಲ್ ಅವರ ಜೊತೆಯಲ್ಲಿ ಅತ್ಯಂತ ಸೀಮಿತ ಸಂಖ್ಯೆಯ ಜನರು ಮಾತ್ರ ಭಾಗವಹಿಸಬೇಕೆಂದು ಭದ್ರತಾ ಸಂಸ್ಥೆಗಳು ಸೂಚಿಸಿರುವುದಾಗಿ ಹೇಳಲಾಗುತ್ತಿದೆ.

ಕೆಲ ರಸ್ತೆಗಳು ಉದ್ವಿಗ್ನವಾಗಿರುವುದು ಗೊತ್ತಿರುವುದರಿಂದ ಮೆರವಣಿಗೆ ಮಾಡುವ ಬದಲು ಕಾರಿನಲ್ಲಿ ಹೋಗುವಂತೆ ರಾಹುಲ್ ಗಾಂಧಿಗೆ ಸೂಚಿಸಲಾಗಿದೆಯಂತೆ.

ಜನವರಿ 30 ರಂದು ಶ್ರೀನಗರದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಸಭೆ ನಡೆಯಲಿದ್ದು, ಅಲ್ಲಿ ರಾಹುಲ್ ಗಾಂಧಿಯ ಭಾರತ್ ಜೋಡೋ ಯಾತ್ರೆ ಪೂರ್ಣಗೊಳ್ಳಲಿದೆ.

ಈ ಸಭೆಯಲ್ಲಿ ಆಮ್ ಆದ್ಮಿ ಪಕ್ಷ, ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ, ವೈಎಸ್‌ಆರ್ ಕಾಂಗ್ರೆಸ್, ಬಿಜು ಜನತಾ ದಳ, ಅಕಾಲಿದಳ, ಎಐಎಡಿಎಂಕೆ ಮತ್ತು ಓವೈಸಿ ಅವರ ಎಐಎಂಐಎಂಗೆ ಆಹ್ವಾನ ನೀಡಬಾರದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯ ಸುರಕ್ಷತೆಗೆ ಸಂಬಂಧಿಸಿದ ಸೂಚನೆಗಳು ಬಿಡುಗಡೆ ಮಾಡಲಾಗಿದೆ.

Z+ ಭದ್ರತೆ: ರಾಹುಲ್ ಗಾಂಧಿಗೆ ಈಗ Z+ ವರ್ಗದ ಭದ್ರತೆ ನೀಡಲಾಗಿದೆ. ಅದರಂತೆ 8 ರಿಂದ 9 ಕಮಾಂಡೋಗಳು ದಿನದ 24 ಗಂಟೆಯೂ ಅವರ ಸುತ್ತ ಕಾವಲು ಕಾಯಲಿದ್ದಾರೆ. ಕಳೆದ ತಿಂಗಳು ರಾಹುಲ್ ಗಾಂಧಿ ಅವರು ತಮ್ಮ ಯಾತ್ರೆಯ ಮಾರ್ಗದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು ಎಂಬುದು ಗಮನಾರ್ಹ.