ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣದಿಂದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹಾಜರಾಗುತ್ತಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದರ ಬಗ್ಗೆ ಜೆಡಿಎಸ್ ಕಛೇರಿಯಿಂದ ಹೊರಡಿಸಲಾಗಿರುವ ಮಾನ್ಯ ಮಾಜಿ ಪ್ರಧಾನಮಂತ್ರಿಗಳ ಮಾಧ್ಯಮ ಹೇಳಿಕೆಯಲ್ಲಿ, “ಕನ್ನಡನಾಡಿನ ಹೆಮ್ಮೆಯ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಇಂದು ಸಂಜೆ ನನಗಾಗಿ ಪರಿಷತ್ತಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಅನಾರೋಗ್ಯದ ಕಾರಣಕ್ಕೆ ಹಾಜರಾಗುತ್ತಿಲ್ಲದಿರುವುದಕ್ಕೆ ವೈಯಕ್ತಿಕವಾಗಿ ನನಗೆ ಬಹಳ ನೋವಿದೆ.
ಇದನ್ನೂ ಓದಿ: ಜಾತಿವಾರು ಜನಗಣತಿ: “ಸುಳ್ಳುಗಳನ್ನು ಹರಡುವ ಬದಲು ಉತ್ತರಿಸಿ..” – ಅಮಿತ್ ಶಾ ಅವರನ್ನು ಪ್ರಶ್ನಿಸಿದ ತೇಜಸ್ವಿ ಯಾದವ್!
ಕೊಂಚ ಮಟ್ಟಿಗೆ ಅನಾರೋಗ್ಯ ಉಂಟಾಗಿ ದೇಹದಲ್ಲಿ ತುಸು ನಿತ್ರಾಣವಿದೆ. ವೈದ್ಯರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುವಂತೆ ಸಲಹೆ ಮಾಡಿದ್ದಾರೆ.
ಆದರೆ, ಈ ಕಾರ್ಯಕ್ರಮ ಪೂರ್ವ ನಿಗದಿಯಾಗಿರುವ ಕಾರಣಕ್ಕೆ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಎಂ.ಎನ್.ವೆಂಕಟಾಚಲಯ್ಯ ರವರು ಹಾಗೂ ಪರಿಷತ್ ಅಧ್ಯಕ್ಷರು, ನಾಡೋಜ ಡಾ.ಮಹೇಶ್ ಜೋಶಿ ಅವರು ನನ್ನ ಸ್ವಗೃಹಕ್ಕೆ ಆಗಮಿಸಿ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಇವರ ಪ್ರೀತಿ, ವಿಶ್ವಾಸಕ್ಕೆ ನಾನು ಕೃತಜ್ಞನಾಗಿದ್ದೇನೆ.
ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ಸ್ವೀಕರಿಸುವುದು ಮಹಾನ್ ಭಾಗ್ಯ ಎಂದೇ ನಾನು ಭಾವಿಸಿದ್ದೇನೆ.” ಎಂದು ಹೇಳಿದ್ದಾರೆ.