ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನರ್ಮದ ನದಿ Archives » Dynamic Leader
October 19, 2024
Home Posts tagged ನರ್ಮದ ನದಿ
ದೇಶ

ಅಹಮದಾಬಾದ್: ಭಾರತದ ಉಕ್ಕಿನ ಮನುಷ್ಯ ಎಂದು ಬಣ್ಣಿಸಲಾಗುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಮಾಲಾರ್ಪಣೆ ಮಾಡಿದರು.

ಅವರ ಜನ್ಮದಿನದಂದು ಪ್ರಧಾನಿ ಮೋದಿ ಗುಜರಾತ್‌ನಲ್ಲಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ. ಏಕತೆಯನ್ನು ಸಾರುವ ವಿಶ್ವದ ಅತಿದೊಡ್ಡ ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಯನ್ನು ನರ್ಮದಾ ನದಿಯ ದಡದಲ್ಲಿ ಸ್ಥಾಪಿಸಲಾಗಿದೆ. ಪ್ರಧಾನಿಯವರು ಇಲ್ಲಿಗೆ ಭೇಟಿ ನೀಡಿ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.

ದೇಶ ರಾಜ್ಯ

ಜಬಲ್ಪುರ್: ಮಧ್ಯಪ್ರದೇಶಕ್ಕೆ ಭೇಟಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಲ್ಲಿನ ನರ್ಮದಾ ನದಿಗೆ ವಿಶೇಷ ಆರತಿ ಪೂಜೆ ಸಲ್ಲಿಸಿದರು. ನಂತರ ನಡೆದ ಸಾರ್ವಜನಿಕ ಸಭೆಯಲ್ಲಿ, ‘ರಾಜ್ಯದಲ್ಲಿ 220 ತಿಂಗಳ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿವೆ’ ಎಂದು ಆರೋಪಿಸಿದರು.

ಮಧ್ಯಪ್ರದೇಶ ರಾಜ್ಯದಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಯಲಿದೆ. ಇದಕ್ಕಾಗಿ ಪ್ರಿಯಾಂಕಾ ಅಭಿಯಾನ ಆರಂಭಿಸಲಿದ್ದಾರೆ. ಇಂದು ಜಬಲ್ಪುರಕ್ಕೆ ಆಗಮಿಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಕಮಲ್ ನಾಥ್, ಸಂಸದರು ಹಾಗೂ ಶಾಸಕರೊಂದಿಗೆ ನರ್ಮದಾ ನದಿಗೆ ತೆರಳಿ, ಅಲ್ಲಿ ಆರತಿ ಪೂಜೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹನುಮಂತನ ವೇಷ ಧರಿಸಿದ ಸ್ವಯಂ ಸೇವಕರು ಪ್ರಿಯಾಂಕಾ ಅವರನ್ನು ಸ್ವಾಗತಿಸಿದರು. ಅನೇಕರು ಪ್ರಿಯಾಂಕಾಗೆ ಹಿಂದೂ ದೇವರಾದ ಗಣೇಶನ ಚಿತ್ರಗಳನ್ನು ಉಡುಗೊರೆಯಾಗಿ ನೀಡಿದರು.

ನಂತರ ಜಬಲ್‌ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ, “ನಮ್ಮ ಪಕ್ಷ (ಕಾಂಗ್ರೆಸ್) ಏನು ಭರವಸೆ ನೀಡಿತ್ತೋ, ಅವುಗಳನ್ನು ಛತ್ತೀಸ್‌ಗಢ ಮತ್ತು ಹಿಮಾಚಲ ಪ್ರದೇಶದಲ್ಲಿ ಮಾಡಿ ತೋರಿಸಿದ್ದೇವೆ. ಕಾಂಗ್ರೆಸ್ ಆಡಳಿತದ ರಾಜ್ಯಗಳ ಸ್ಥಿತಿಯನ್ನು ನೋಡಿದರೆ ಅದು ನಿಮಗೇ ಅರ್ಥವಾಗುತ್ತದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಲವು ಕಾಮಗಾರಿಗಳು ಮತ್ತು ಅಭಿವೃದ್ಧಿಗಳನ್ನು ಕೈಗೊಳ್ಳಲಾಯಿತು. ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ, ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿತು. ವ್ಯಾಪಾರ ಮತ್ತು ಪಡಿತರ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ.

ರಾಜ್ಯದಲ್ಲಿ 220 ತಿಂಗಳ ಬಿಜೆಪಿ ಆಡಳಿತದಲ್ಲಿ 225 ಹಗರಣಗಳು ನಡೆದಿವೆ. ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಕೇವಲ 21 ಸರ್ಕಾರಿ ಉದ್ಯೋಗಗಳನ್ನು ಮಾತ್ರ ನೀಡಿದೆ. ಈ ಅಂಕಿ ಅಂಶವನ್ನು ನನ್ನ ಗಮನಕ್ಕೆ ತಂದಾಗ, ನಾನು ನನ್ನ ಕಛೇರಿಯಿಂದ ಮೂರು ಬಾರಿ ಪರಿಶೀಲಿಸಿದ್ದೇನೆ. ಅದು ಸತ್ಯ. ಮೇ 28 ರಂದು ಉಜ್ಜಯಿನಿಯಲ್ಲಿ ಬೀಸಿದ ಜೋರಾದ ಗಾಳಿಗೆ 6 ದೇವರ ಮೂರ್ತಿಗಳು ಬಿದ್ದು ಹಾನಿಗೀಡಾಗಿದ್ದವು. ಚೌಹಾಣ್ ಸರ್ಕಾರ ದೇವರನ್ನೂ ಬಿಡಲಿಲ್ಲ” ಎಂದರು.