ಡೈನಾಮಿಕ್ ಲೀಡರ್ ನ್ಯೂಸ್, Dynamic Leader - Kannada Online News Portal 24x7 | Latest News in Kannada online | ಕನ್ನಡ ಸುದ್ದಿ
ನಾಗಮಂಗಲ Archives » Dynamic Leader
November 24, 2024
Home Posts tagged ನಾಗಮಂಗಲ
ರಾಜ್ಯ

ಮಂಡ್ಯ: ನಾಗಮಂಗಲ ತಾಲೂಕಿನ ಮಲ್ಲೇಗೌಡನಹಳ್ಳಿ ಕೆರೆ ಕಟ್ಟೆಗೆ ಇಂದು ಭೇಟಿ ನೀಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಲ್ಲಿ ಪರಿಶೀಲನೆ ನಡೆಸಿದರು.

ಕೆರೆ ಏರಿ ಒಡೆದ ಪರಿಣಾಮ ಅಪಾರ ಪ್ರಮಾಣದಲ್ಲಿ ರೈತರ ಬೆಳೆ ನಾಶವಾಗಿದೆ. ನೊಂದ ರೈತರಿಗೆ ಧೈರ್ಯ ಹೇಳಿ, ಪರಿಹಾರ ಕೊಡಿಸುವ ಬಗ್ಗೆ ಮಂಡ್ಯ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ, ಮಾಜಿ ಸಚಿವ ಸಾರಾ ಮಹೇಶ್, ಶಾಸಕ ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಜೇಗೌಡ ಹಾಗೂ ಇನ್ನಿತರೆ ನಾಯಕರೊಂದಿಗೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ರಾಜಕೀಯ

ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ” ಎಂದು ಹೇಳಿದರು.

“ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು. 2013ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ನಮ್ಮ ಸರ್ಕಾರವೇ ಪ್ರಯತ್ನಿಸಿದ್ದು ಹೊರತು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿತ್ತು” ಎಂದು ಆರೋಪಿಸಿದರು.

“ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದು ಹೇಳಿದರು.

“ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್‌ಪೆಕ್ಟರನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟು, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು” ಎಂದು ಹೇಳಿದರು.